ಮಸಾಜ್ ಮಷಿನ್ ಪಾರ್ಸಲ್‌ನಲ್ಲಿ ಹಾರಿ ಬಂತು 1 ಕೋಟಿ ಮೌಲ್ಯದ ನಶೆ ಮದ್ದು!
[lazy-load-videos-and-sticky-control id=”KE-owMvKBpQ”] ಬೆಂಗಳೂರು: ಡ್ರಗ್ಸ್ ದಂಧೆ ಇತ್ತೀಚೆಗೆ ಅತಿ ಹೆಚ್ಚು ಸುದ್ದಿಯಲ್ಲಿದೆ. ನಮ್ಮ ಅಧಿಕಾರಿಗಳು ಸಹ ಡ್ರಗ್ಸ್ ನಿರ್ಮೂಲನೆಗಾಗಿ ಪಣ ತೊಟ್ಟು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಇದರ ನಡುವೆಯೇ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 1 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಬಳಿಯ KIAB ಯಲ್ಲಿ ಮಸಾಜ್ ಮಾಡುವ ಮಷಿನ್ ಪಾರ್ಸಲ್‌ನಲ್ಲಿ ಡ್ರಗ್ಸ್ ಇರುವುದು ಪತ್ತೆಯಾಗಿದೆ. ಕಸ್ಟಮ್ಸ್ ಅಧಿಕಾರಿಗಳಿಂದ ಎಂಡಿಎಂಎ, ಎಕ್ಸ್‌ಟಸಿ ಮಾತ್ರೆ ಜಪ್ತಿ ಮಾಡಲಾಗಿದೆ. ಬೆಲ್ಜಿಯಂನಿಂದ ಭಾರತಕ್ಕೆ […]

[lazy-load-videos-and-sticky-control id=”KE-owMvKBpQ”]
ಬೆಂಗಳೂರು: ಡ್ರಗ್ಸ್ ದಂಧೆ ಇತ್ತೀಚೆಗೆ ಅತಿ ಹೆಚ್ಚು ಸುದ್ದಿಯಲ್ಲಿದೆ. ನಮ್ಮ ಅಧಿಕಾರಿಗಳು ಸಹ ಡ್ರಗ್ಸ್ ನಿರ್ಮೂಲನೆಗಾಗಿ ಪಣ ತೊಟ್ಟು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಇದರ ನಡುವೆಯೇ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 1 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಬಳಿಯ KIAB ಯಲ್ಲಿ ಮಸಾಜ್ ಮಾಡುವ ಮಷಿನ್ ಪಾರ್ಸಲ್‌ನಲ್ಲಿ ಡ್ರಗ್ಸ್ ಇರುವುದು ಪತ್ತೆಯಾಗಿದೆ. ಕಸ್ಟಮ್ಸ್ ಅಧಿಕಾರಿಗಳಿಂದ ಎಂಡಿಎಂಎ, ಎಕ್ಸ್‌ಟಸಿ ಮಾತ್ರೆ ಜಪ್ತಿ ಮಾಡಲಾಗಿದೆ. ಬೆಲ್ಜಿಯಂನಿಂದ ಭಾರತಕ್ಕೆ ಈ ಪಾರ್ಸಲ್ ಬಂದಿದೆ. ಇದರಲ್ಲಿ ಸುಮಾರು 1980 ಗ್ರಾಂ ಪ್ರಮಾಣದ ಎಂಡಿಎಂಎ, ಎಕ್ಸ್‌ಟಸಿ ಮಾತ್ರೆಗಳಿವೆ. ಇದು ಸುಮಾರು 1 ಕೋಟಿ ರೂ ಗೂ ಅಧಿಕ ಬೆಲೆ ಬಾಳುತ್ತೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


Published On - 10:48 am, Wed, 9 September 20




