AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

'ಅಪ್ಪಾ... ಎದ್ದೇಳಪ್ಪ': ಅರುಣ್ ಸಾಳುಂಕೆ ಮೃತದೇಹದ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಮಗಳು

‘ಅಪ್ಪಾ… ಎದ್ದೇಳಪ್ಪ’: ಅರುಣ್ ಸಾಳುಂಕೆ ಮೃತದೇಹದ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಮಗಳು

ಸಹದೇವ್​ ಮಾನೆ
| Edited By: |

Updated on: Nov 02, 2026 | 12:16 PM

Share

ಉತ್ತರಾಖಂಡ್ ಹೆಲಿಕಾಪ್ಟರ್ ದುರಂತದಲ್ಲಿ ಮೃತಪಟ್ಟ ಸಿಸಿಬಿ ಇನ್ಸ್‌ಪೆಕ್ಟರ್ ಅರುಣ್ ಸಾಳುಂಕೆ ಅವರ ಪಾರ್ಥಿವ ಶರೀರ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಅರಟಾಳ ಗ್ರಾಮಕ್ಕೆ ತಲುಪಿದ್ದು, ಕುಟುಂಬಸ್ಥರ ಜೊತೆಗೆ ಗ್ರಾಮಸ್ಥರು ಹಾಗೂ ಪೊಲೀಸ್ ಸಿಬ್ಬಂದಿ ಭಾಷ್ಪಾಂಜಲಿ ಸಲ್ಲಿಸಿದ್ದಾರೆ. ಅಪ್ಪನ ಫೋಟೋ ನೋಡಿ ಬಿಕ್ಕಿ ಬಿಕ್ಕಿ ಅಳುತ್ತಲೇ ಅರುಣ್​​ ಅವರ ಮಗಳು ತಾಯಿಯನ್ನೂ ಸಂತೈಸಿದ ಮನಃಕಲಕುವ ದೃಶ್ಯಗಳು ಸ್ಥಳದಲ್ಲಿ ಕಂಡುಬಂದಿವೆ.

ಬೆಳಗಾವಿ, ನವೆಂಬರ್​​ 02: ಉತ್ತರಾಖಂಡ್‌ನಲ್ಲಿ ನಡೆದಿದ್ದ ಹೆಲಿಕಾಪ್ಟರ್‌ ದುರಂತದಲ್ಲಿ ಮೃತಪಟ್ಟಿದ್ದ ಸಿಸಿಬಿ ಇನ್ಸ್‌ಪೆಕ್ಟರ್‌ ಅರುಣ್ ಸಾಳುಂಕೆ ಮೃತದೇಹ ಅವರ ಸ್ವಗ್ರಾಮವಾದ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಅರಟಾಳ ಗ್ರಾಮಕ್ಕೆ ತಲುಪಿದ್ದು, ಅರುಣ್ ಕುಟುಂಬಕ್ಕೆ ಸೇರಿದ ಜಮೀನಿನಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮೃತದೇಹ ಕಂಡು ಅರುಣ್​​ ಅವರ ಪತ್ನಿ ಮತ್ತು ಮಗಳ ಗೋಳಾಟ ನೆರೆದಿದ್ದವರ ಕಣ್ಣಲ್ಲೂ ನೀರು ತರಿಸಿದೆ. ಅಪ್ಪನ ಫೋಟೋ ನೋಡಿ ಬಿಕ್ಕಿ ಬಿಕ್ಕಿ ಅಳುತ್ತಲೇ ಅರುಣ್​​ ಅವರ ಮಗಳು ತಾಯಿಯನ್ನೂ ಸಂತೈಸಿದ ಮನಕಲಕುವ ದೃಶ್ಯಗಳು ಸ್ಥಳದಲ್ಲಿ ಕಂಡುಬಂತು. ಗ್ರಾಮಸ್ಥರು, ಪೊಲೀಸ್​​ ಅಧಿಕಾರಿಗಳು ಸೇರಿದಂತೆ ನೂರಾರು ಮಂದಿ ಅರುಣ್​​ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಸಹದೇವ್​ ಮಾನೆ
ಸಹದೇವ್​ ಮಾನೆ

ಸಹದೇವ ಯಲ್ಲಪ್ಪ ಮಾನೆ. ಹುಟ್ಟಿದ್ದು ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮ. ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕಳೆದ 12 ವರ್ಷದಿಂದ ಟಿವಿ ಮಾಧ್ಯಮದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. 2014ರಲ್ಲಿ ಬೀದರ್ ಜಿಲ್ಲೆಯಿಂದ ವೃತ್ತಿ ಜೀವನ ಪ್ರಾರಂಭ ಮಾಡಿ ಕಲಬುರಗಿ, ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಸದ್ಯ ‘ಟಿವಿ9’ ಕನ್ನಡ ಸುದ್ದಿ ವಾಹಿನಿಯಲ್ಲಿ 9ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ಜಿಲ್ಲೆಯಲ್ಲಿ ಅತ್ಯುತ್ತಮ ಜಿಲ್ಲಾ ವರದಿಗಾರ ಪ್ರಶಸ್ತಿ ಪಡೆದಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿದೆ. ರೈತರ ಸಮಸ್ಯೆಗಳತ್ತ ಬೆಳಕು ಚೆಲ್ಲುವ ವರದಿ ಸೇರಿ ಗಡಿ ಸಮಸ್ಯೆ, ಕ್ರೈಮ್, ಪ್ರವಾಹ ಪರಿಸ್ಥಿತಿ, ನೆರೆಯ ಮಹಾರಾಷ್ಟ್ರ, ಗೋವಾದಲ್ಲಿನ ಬೆಳವಣಿಗೆ ಕುರಿತು ವರದಿ ಮಾಡುತ್ತಿರುವುದು ವಿಶೇಷ.

Read More