Malaprabha River: ಮಲಪ್ರಭಾ ನದಿಯ ಆರ್ಭಟ; ಕುಸಿದ ಸೇತುವೆ

Edited By: ಕಿರಣ್ ಹನುಮಂತ್​ ಮಾದಾರ್

Updated on: Jul 23, 2023 | 2:09 PM

ಪಶ್ಚಿಮ ಘಟ್ಟ ಪ್ರದೇಶದಲ್ಲಿ ವರುಣನ ಆರ್ಭಟ ನಿಲ್ಲುತ್ತಿಲ್ಲ. ಪರಿಣಾಮ ಮಲಪ್ರಭಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಖಾನಾಪುರ ತಾಲೂಕಿನ ಪಾರಿಶ್ವಾಡ ಗ್ರಾಮದ ಬಳಿ ಮಲಪ್ರಭಾ ನದಿಗೆ ಅಡ್ಡಲಾಗಿ ಕಟ್ಟಿರುವ ಸೇತುವೆ ಪಕ್ಕದಲ್ಲಿ ಮಣ್ಣು ಕುಸಿದಿದೆ.

ಬೆಳಗಾವಿ, ಜು.23: ಪಶ್ಚಿಮ ಘಟ್ಟ ಪ್ರದೇಶದಲ್ಲಿ ವರುಣನ ಆರ್ಭಟ ನಿಲ್ಲುತ್ತಿಲ್ಲ. ಪರಿಣಾಮ ಮಲಪ್ರಭಾ ನದಿ(Malaprabha River) ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಹೌದು ಮಲಪ್ರಭಾ ನದಿಗೆ ಅಡ್ಡಲಾಗಿ ಕಟ್ಟಿರುವ ಸೇತುವೆ ಪಕ್ಕದಲ್ಲಿ ಮಣ್ಣು ಕುಸಿದಿರುವ ಘಟನೆ ಖಾನಾಪುರ ತಾಲೂಕಿನ ಪಾರಿಶ್ವಾಡ ಗ್ರಾಮದ ಬಳಿ ನಡೆದಿದೆ. ಬೆಳಗಾವಿಯಿಂದ ಹಿರೇಮುನವಳ್ಳಿ, ಅವರೊಳ್ಳಿ ಸೇರಿದಂತೆ 30 ಗ್ರಾಮಗಳಿಗೆ ಸಂಪರ್ಕಿಸುವ ಪಾರಿಶ್ವಾಡ ಗ್ರಾಮದ ಸೇತುವೆ ಇದಾಗಿದ್ದು, ಯಾವುದೇ ಸಮಯದಲ್ಲಿ ಸೇತುವೆ ಕೊಚ್ಚಿ ಹೋಗುವ ಭೀತಿ ಎದುರಾಗಿದೆ. ಆದರೂ ವಾಹನಗಳು ಸೇತುವೆ ಮೇಲೆ ಸಂಚರಿಸುತ್ತಿವೆ.

ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Jul 23, 2023 02:08 PM
Loading...
Unable to load recommendations.
Follow Us
ಸಹದೇವ್​ ಮಾನೆ

ಸಹದೇವ ಯಲ್ಲಪ್ಪ ಮಾನೆ. ಹುಟ್ಟಿದ್ದು ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮ. ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕಳೆದ 12 ವರ್ಷದಿಂದ ಟಿವಿ ಮಾಧ್ಯಮದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. 2014ರಲ್ಲಿ ಬೀದರ್ ಜಿಲ್ಲೆಯಿಂದ ವೃತ್ತಿ ಜೀವನ ಪ್ರಾರಂಭ ಮಾಡಿ ಕಲಬುರಗಿ, ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಸದ್ಯ ‘ಟಿವಿ9’ ಕನ್ನಡ ಸುದ್ದಿ ವಾಹಿನಿಯಲ್ಲಿ 9ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ಜಿಲ್ಲೆಯಲ್ಲಿ ಅತ್ಯುತ್ತಮ ಜಿಲ್ಲಾ ವರದಿಗಾರ ಪ್ರಶಸ್ತಿ ಪಡೆದಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿದೆ. ರೈತರ ಸಮಸ್ಯೆಗಳತ್ತ ಬೆಳಕು ಚೆಲ್ಲುವ ವರದಿ ಸೇರಿ ಗಡಿ ಸಮಸ್ಯೆ, ಕ್ರೈಮ್, ಪ್ರವಾಹ ಪರಿಸ್ಥಿತಿ, ನೆರೆಯ ಮಹಾರಾಷ್ಟ್ರ, ಗೋವಾದಲ್ಲಿನ ಬೆಳವಣಿಗೆ ಕುರಿತು ವರದಿ ಮಾಡುತ್ತಿರುವುದು ವಿಶೇಷ.

Read More