Video: ಮಗುವಿನ ಕತ್ತು ಹಿಸುಕಿ ಮನ ಬಂದಂತೆ ಥಳಿಸಿದ ತಾಯಿ;ವಿಡಿಯೋ ವೈರಲ್
ಮಗುವಿನ ಕತ್ತು ಹಿಸುಕಿ ಹಿಡಿದಿಟ್ಟುಕೊಂಡು ತಾಯಿಯೊಬ್ಬಳು ಥಳಿಸುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ. ಈ ಹೃದಯ ವಿದ್ರಾವಕ ಘಟನೆಯ ವಿಡಿಯೋ ಇಲ್ಲಿದೆ ನೋಡಿ.
ಮಹಿಳೆಯೊಬ್ಬಳು ತನ್ನ ಮಗುವನ್ನು ಮನಬಂದಂತೆ ಥಳಿಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ. ಮಗುವಿನ ಕತ್ತು ಹಿಸುಕಿ ಹಿಡಿದಿಟ್ಟುಕೊಂಡು ಥಳಿಸಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಪುಟ್ಟ ಕಂದಮ್ಮನನ್ನು ಈ ರೀತಿ ಕ್ರೂರವಾಗಿ ಹಿಂಸೆ ನೀಡಿರುವ ಘಟನೆ ಗುಜರಾತ್‌ನದ್ದು ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹೇಳಿಕೊಳ್ಳಲಾಗುತ್ತಿದೆ. ಈ ಕ್ರೂರ ತಾಯಿಯನ್ನು ಬಂಧಿಸಿ ಆಕೆಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಗುಜರಾತ್ ಸರ್ಕಾರ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳಿಗೆ ಸಾಮಾಜಿಕ ಮಾಧ್ಯಮ ಬಳಕೆದಾರರು ಮನವಿ ಮಾಡಿದ್ದಾರೆ. ಆದಾಗ್ಯೂ, ಕೆಲವು ಬಳಕೆದಾರರು ಈ ವೀಡಿಯೊ ಹಳೆಯದು ಎಂದು ಹೇಳುತ್ತಿದ್ದಾರೆ. ಆದರೂ ಈ ಹೃದಯ ವಿದ್ರಾವಕ ಘಟನೆಯನ್ನು ವಿಡಿಯೋ ಮಾಡುತ್ತಿದ್ದ ವ್ಯಕ್ತಿ ಮಗುವನ್ನು ರಕ್ಷಿಸಲು ಮುಂದಾಗದಿರುವುದು ಅತ್ಯಂತ ಅಚ್ಚರಿಯ ಸಂಗತಿ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಹೊಳೆನರಸೀಪುರ ಗ್ರಾಮಾಂತರ ಠಾಣೆ ಪೊಲೀಸರಿಂದ ವಕೀಲ ಮತ್ತು ಬಿಜೆಪಿ ಮುಖಂಡ ಡಿ ದೇವರಾಜೇಗೌಡ ವಿಚಾರಣೆ
Published on: May 12, 2024 03:15 PM
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ

