ನಂದಿನಿ ಬೆನ್ನಲ್ಲೇ ಮದರ್ ಡೈರಿ ಹಾಲಿನ ದರದಲ್ಲಿಯೂ ಏರಿಕೆ: ಲೀಟರ್​​ಗೆ 2ರಿಂದ 4 ರೂ.ವರೆಗೆ ಹೆಚ್ಚಳ

Updated on: Nov 11, 2026 | 1:06 PM

ನಂದಿನಿ ಹಾಲಿನ ದರ ಏರಿಕೆಯ ಬೆನ್ನಲ್ಲೇ ಮದರ್ ಡೈರಿ ಕೂಡ ಹಾಲಿನ ಬೆಲೆಯನ್ನು ಲೀಟರ್‌ಗೆ ₹2 ರಿಂದ ₹4 ರವರೆಗೆ ಹೆಚ್ಚಿಸಿದ್ದು, ನಾಳೆಯಿಂದಲೇ ನೂತನ ದರ ಜಾರಿಗೆ ಬರಲಿದೆ. ಇದರಿಂದ ಗ್ರಾಹಕರಿಗೆ ಬೆಲೆ ಏರಿಕೆಯ ಬಿಸಿ ತಟ್ಟಿದೆ. ರೈತರಿಂದ ಹಾಲು ಖರೀದಿ ದರ ಹೆಚ್ಚಳದ ಹಿನ್ನೆಲೆ ಬೆಲೆ ಏರಿಕೆ ಮಾಡಲಾಗಿದ್ದು, ಹಾಲು ಉತ್ಪಾದನಾ ವೆಚ್ಚ ಹೆಚ್ಚಳವೂ ದರ ಪರಿಷ್ಕರಣೆಗೆ ಪ್ರಮುಖ ಕಾರಣ ಎನ್ನಲಾಗಿದೆ.

ಬೆಂಗಳೂರು, ನವೆಂಬರ್​​ 11: ನಂದಿನಿ ಬೆನ್ನಲ್ಲೇ ಮದರ್ ಡೈರಿ ಹಾಲಿನ ದರದಲ್ಲಿಯೂ ಏರಿಕೆಯಾಗಿದೆ. ಪ್ರತಿ ಲೀಟರ್ ಹಾಲಿನ ಬೆಲೆಯಲ್ಲಿ 2ರಿಂದ 4 ರೂ.ವರೆಗೆ ಏರಿಕೆಯಾಗಿದ್ದು, ನಾಳೆಯಿಂದಲೇ ಪರಿಷ್ಕೃತ ದರ ಜಾರಿಗೆ ಬರಲಿದೆ. ರೈತರಿಂದ ಹಾಲು ಖರೀದಿ ದರ ಹೆಚ್ಚಳದ ಹಿನ್ನೆಲೆ ಬೆಲೆ ಏರಿಕೆ ಮಾಡಲಾಗಿದ್ದು, ಹಾಲು ಉತ್ಪಾದನಾ ವೆಚ್ಚ ಹೆಚ್ಚಳವೂ ದರ ಪರಿಷ್ಕರಣೆಗೆ ಪ್ರಮುಖ ಕಾರಣ ಎನ್ನಲಾಗಿದೆ. ಒಂದು ಕಡೆ ನಂದಿನಿ, ಮತ್ತೊಂದೆಡೆ ಮದರ್ ಡೈರಿ ಹಾಲಿನ ದರದಲ್ಲಿಯೂ ಈಗ ಏರಿಕೆಯಿಂದ ಗ್ರಾಹಕರಿಗೆ ಬೆಲೆ ಏರಿಕೆಯ ಬಿಸಿ ಮತ್ತಷ್ಟು ತಟ್ಟಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Loading...
Unable to load recommendations.
Follow Us
ಪ್ರಸನ್ನ ಹೆಗಡೆ

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More