ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಗಂಭೀರ ಸ್ವರೂಪದ ಗಾಯಗಾಳಾಗಿಲ್ಲ ಎಂದ ಮಗ ಮೃಣಾಲ್

|

Updated on: Jan 14, 2025 | 11:13 AM

ಮೃಣಾಲ್ ಹೇಳುವ ಪ್ರಕಾರ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪ್ರಯಾಣಿಸುತ್ತಿದ್ದ ಕಾರು ಬೆಳಗ್ಗೆ ಸುಮಾರು 6 ಗಂಟೆಗೆ ಬೆಳಗಾವಿ ಜಿಲ್ಲೆ ಕಿತ್ತೂರು ತಾಲ್ಲೂಕಿನ ಅಂಬಡಗಟ್ಟಿ ಎಂಬ ಸ್ಥಳದಲ್ಲಿ ಅಪಘಾತಕ್ಕೀಡಾಗಿದೆ. ನಾಯಿಯೊಂದು ಅಡ್ಡಬಂದಿದ್ದರಿಂದ ಅದು ಚಕ್ರದಡಿ ಸಿಲುಕುವುದನ್ನು ತಪ್ಪಿಸಲು ಚಾಲಕ ಜೋರಾಗಿ ಬ್ರೇಕ್ ಅದುಮಿದಾಗ ಸರ್ವಿಸ್ ರೋಡ್ ಗೆ ಹೋದ ಕಾರು ಮರವೊಂದಕ್ಕೆ ಢಿಕ್ಕಿ ಹೊಡೆದಿದೆ.

ಬೆಳಗಾವಿ: ಲಕ್ಷ್ಮಿ ಹೆಬ್ಬಾಳ್ಕರ್ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾದ ಘಟನೆಗೆ ಸಂಬಂಧಿಸಿದಂತೆ ಅವರ ಮಗ ಮೃಣಾಲ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು ಸಚಿವೆ ಮತ್ತು ಅವರೊಂದಿಗೆ ಪ್ರಯಾಣಿಸುತ್ತಿದ್ದ ವಿಧಾನ ಪರಿಷತ್ ಸದಸ್ಯ ಹಾಗೂ ಸಹೋದರನಿಗೆ ಗಂಭೀರಸ್ವರೂಪದ ಗಾಯಗಳೇನೂ ಅಗಿಲ್ಲ, ಸಚಿವೆಯ ಬೆನ್ನುಮೂಳೆಗೆ ಗಾಯವಾಗಿದೆ, ಬೆಳಗಾವಿಯ ಖಾಸಗಿ ಆಸ್ಪತ್ರೆಯೊಂದರಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವರೆಂದು ಹೇಳಿದರು. ನಿನ್ನೆ ಬೆಂಗಳೂರಲ್ಲಿ ಕೆಪಿಸಿಸಿ ಸರ್ವ ಸದಸ್ಯರ ಸಭೆ ಮತ್ತು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಪಾಲ್ಗೊಂಡ ಸಚಿವೆ ತಮ್ಮ ಕ್ಷೇತ್ರಕ್ಕೆ ವಾಪಸ್ಸಾಗುತ್ತಿದ್ದಾಗ ಅಪಘಾತ ಜರುಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಬೆಳಗಾವಿಯಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಸಹೋದರ ಕಾರು ಅಪಘಾತ; ಸ್ವಲ್ಪದರಲ್ಲಿ ಪ್ರಾಣಾಪಾಯದಿಂದ ಪಾರು