AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸತ್ತ ಮರಿಯನ್ನೂ ಬಿಟ್ಟುಕೊಡದ ತಾಯಿ ಕೋತಿ: ಮುಂಡರಗಿಯಲ್ಲಿ ಮನಕಲಕುವ ದೃಶ್ಯ

ಸತ್ತ ಮರಿಯನ್ನೂ ಬಿಟ್ಟುಕೊಡದ ತಾಯಿ ಕೋತಿ: ಮುಂಡರಗಿಯಲ್ಲಿ ಮನಕಲಕುವ ದೃಶ್ಯ

ಸಂಜೀವ ಕುಮಾರ್​ ಪಾಂಡ್ರೆ, ಗದಗ
| Edited By: |

Updated on: Nov 24, 2026 | 12:04 PM

Share

ಗದಗ ಜಿಲ್ಲೆಯ ಮುಂಡರಗಿ ಪಟ್ಟಣದ ಹೇಮರೆಡ್ಡಿ ಮಲ್ಲಮ್ಮ ನಗರದಲ್ಲಿ ತಾಯಿ ಕೋತಿಯ ರೋಧನೆಯ ಮನಕಲಕುವ ದೃಶ್ಯ ಕಂಡುಬಂದಿದೆ. ಮರಿ ಮೃತಪಟ್ಟಿದ್ದರೂ ಅದರ ಅರಿವಿಲ್ಲದೆ ತಾಯಿ ಕೋತಿಯೊಂದು ಮರಿಯನ್ನು ಕಂಕುಳಲ್ಲಿ ಹೊತ್ತುಕೊಂಡು ಇತರ ಕೋತಿಗಳ ಗುಂಪಿನೊಂದಿಗೆ ಓಡಾಡುತ್ತಿದೆ. ಈ ದೃಶ್ಯ ಸ್ಥಳೀಯರ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ನೋಡುಗರನ್ನು ಭಾವುಕರನ್ನಾಗಿಸಿದೆ.

ಗದಗ, ನವೆಂಬರ್ 24: ತಾಯಿಯ ಮಮತೆ ಮನುಷ್ಯರಿಗೆ ಮಾತ್ರ ಸೀಮಿತವಲ್ಲ, ಮೂಕ ಪ್ರಾಣಿಗಳಲ್ಲೂ ಅದು ಎಷ್ಟು ಗಾಢವಾಗಿದೆ ಎಂಬುದಕ್ಕೆ ಗದಗ ಜಿಲ್ಲೆಯ ಮುಂಡರಗಿ ಪಟ್ಟಣದಲ್ಲಿ ಕಂಡುಬಂದ ದೃಶ್ಯವೊಂದು ಸಾಕ್ಷಿಯಾಗಿದೆ. ಮರಿ ಮೃತಪಟ್ಟಿದ್ದರೂ ಅದರ ಸಾವಿನ ಅರಿವಿಲ್ಲದೆ ತಾಯಿ ಕೋತಿಯೊಂದು ಮರಿಯನ್ನು ತನ್ನ ಮಡಿಲಲ್ಲೇ ಇಟ್ಟುಕೊಂಡು ಓಡಾಡುತ್ತಿರುವ ದೃಶ್ಯ ಸ್ಥಳೀಯರ ಮನಕಲಕಿದೆ. ಮುಂಡರಗಿ ಪಟ್ಟಣದ ಹೇಮರೆಡ್ಡಿ ಮಲ್ಲಮ್ಮ ನಗರದಲ್ಲಿ ಈ ಘಟನೆ ಕಂಡುಬಂದಿದೆ. ಮರಿ ಮೃತಪಟ್ಟಿದ್ದರೂ ಅದನ್ನು ತನ್ನಿಂದ ದೂರ ಮಾಡದ ತಾಯಿ ಕೋತಿ, ಇತರ ಕೋತಿಗಳ ಗುಂಪಿನೊಂದಿಗೆ ಮರಿಯನ್ನು ಕಂಕುಳಲ್ಲಿ ಹೊತ್ತುಕೊಂಡೇ ಸುತ್ತಾಡುತ್ತಿದೆ. ತನ್ನ ಕರುಳ ಕುಡಿಯ ಸಾವು ಅರಿವಿಗೆ ಬಾರದಂತೆ ಕಾಣುವ ತಾಯಿ ಕೋತಿ, ಮರಿಯ ಮೇಲಿನ ಮಮತೆಯನ್ನು ಮಾತ್ರ ಬಿಟ್ಟುಕೊಟ್ಟಿಲ್ಲ.

ಈ ಮನಕಲಕುವ ದೃಶ್ಯ ಸ್ಥಳೀಯರ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಸತ್ತ ಮರಿಯನ್ನೂ ಕ್ಷಣಕಾಲ ದೂರ ಮಾಡದೆ ಮಡಿಲಲ್ಲೇ ಇಟ್ಟುಕೊಂಡು ಓಡಾಡುತ್ತಿರುವ ತಾಯಿ ಕೋತಿಯ ಮಮತೆ ಕಂಡು ಸ್ಥಳೀಯರು ಭಾವುಕರಾಗಿದ್ದಾರೆ. ಮೂಕ ಪ್ರಾಣಿಗಳಲ್ಲೂ ತಾಯ್ತನದ ಪ್ರೀತಿ ಎಷ್ಟು ಗಾಢವಾಗಿರುತ್ತದೆ ಎಂಬುದನ್ನು ಸಾರುವ ಈ ದೃಶ್ಯ ನೋಡುಗರ ಕಣ್ಣಂಚಲ್ಲಿ ನೀರು ತರಿಸುತ್ತಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಂಜೀವ ಕುಮಾರ್​ ಪಾಂಡ್ರೆ, ಗದಗ
ಸಂಜೀವ ಕುಮಾರ್​ ಪಾಂಡ್ರೆ, ಗದಗ

ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ‌‌ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ‌ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್‌ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ...

Read More