Motorola Edge 50 Fusion: ಆಕರ್ಷಕ ಫೀಚರ್ಗಳೊಂದಿಗೆ ಮಾರುಕಟ್ಟೆ ಪ್ರವೇಶಿಸಿದ ಮೊಟೊರೊಲ ಫೋನ್
ಹೊಸ ಮೊಟೊರೊಲ ಎಡ್ಜ್ 50 ಫ್ಯೂಷನ್ ಸ್ಮಾರ್ಟ್‌ಫೋನ್ ಅನ್ನು ಕಂಪನಿ ಬಿಡುಗಡೆ ಮಾಡಿದೆ. ನೂತನ ಮೋಟೊ ಫೋನ್ 68W ಟರ್ಬೋಪವರ್ ಚಾರ್ಜಿಂಗ್ ಬೆಂಬಲದೊಂದಿಗೆ 5,000mAh ಬ್ಯಾಟರಿಯನ್ನು ಪ್ಯಾಕ್ ಮಾಡುತ್ತದೆ.
ಲೆನೊವೊ ಒಡೆತನದಲ್ಲಿರುವ ಮೊಟೊರೊಲಾ, ಗ್ಯಾಜೆಟ್ ಮಾರುಕಟ್ಟೆಗೆ ಹೊಸ ಹೊಸ ಸ್ಮಾರ್ಟ್ಫೋನ್ಗಳನ್ನು ಸದಾ ಪರಿಚಯಿಸುತ್ತಿರುತ್ತದೆ. ಹೊಸ ಮೊಟೊರೊಲ ಎಡ್ಜ್ 50 ಫ್ಯೂಷನ್ ಸ್ಮಾರ್ಟ್‌ಫೋನ್ ಅನ್ನು ಕಂಪನಿ ಬಿಡುಗಡೆ ಮಾಡಿದೆ. ನೂತನ ಮೋಟೊ ಫೋನ್ 68W ಟರ್ಬೋಪವರ್ ಚಾರ್ಜಿಂಗ್ ಬೆಂಬಲದೊಂದಿಗೆ 5,000mAh ಬ್ಯಾಟರಿಯನ್ನು ಪ್ಯಾಕ್ ಮಾಡುತ್ತದೆ. ಆಕರ್ಷಕ ಕ್ಯಾಮೆರಾ ಕೂಡ ಇದೆ. ದೇಶದಲ್ಲಿ ಮೊಟೊರೊಲ ಎಡ್ಜ್ 50 ಫ್ಯೂಷನ್ ಫೋನ್ ಎರಡು ಸ್ಟೋರೇಜ್ ಆಯ್ಕೆಯಲ್ಲಿ ಲಭ್ಯವಿದೆ. ಇದರ 8GB RAM ಮತ್ತು 128GB ಸ್ಟೋರೇಜ್ ಸಾಮರ್ಥ್ಯಕ್ಕೆ ₹22,999 ಇದೆ. ಅಂತೆಯೆ ಇದರ 12GB + 256GB ಸ್ಟೋರೇಜ್ ಕಾನ್ಫಿಗರೇಶನ್‌ಗೆ ₹24,999 ನಿಗದಿ ಮಾಡಲಾಗಿದೆ. ಈ ಫೋನ್ ಹಾಟ್ ಪಿಂಕ್ ಮತ್ತು ಮಾರ್ಷ್‌ಮ್ಯಾಲೋ ಬ್ಲೂ ಬಣ್ಣಗಳಲ್ಲಿ ಲಭ್ಯವಿದೆ.
Latest Videos