ವೇದಿಕೆಯಲ್ಲಿ ಕೆಜಿಎಫ್ ಹಾಡಿಗೆ ಮೌನಿ ರಾಯ್ ಭರ್ಜರಿ ಡ್ಯಾನ್ಸ್

Updated on: Aug 25, 2025 | 11:42 AM

ಯಶ್ ನಟನೆಯ ‘ಕೆಜಿಎಫ್’ ಸಿನಿಮಾದಲ್ಲಿ ಹಾಡುಗಳು ಸಖತ್ ಸದ್ದು ಮಾಡಿದವು. ಹಿಂದಿ ವರ್ಷನ್​​ನಲ್ಲಿ ಇದ್ದ ‘ಗಲಿ ಗಲಿ ಮೇ..’ ಹಾಡಿನಲ್ಲಿ ನಟಿ ಮೌನಿ ರಾಯ್ ಅವರು ಭರ್ಜರಿಯಾಗಿ ಡ್ಯಾನ್ಸ್ ಮಾಡಿದ್ದರು. ಈಗ ವೇದಿಕೆಯಲ್ಲಿ ಕೂಡ ಮೌನಿ ರಾಯ್ ಅವರು ಈ ಹಾಡಿಗೆ ಹೆಜ್ಜೆ ಹಾಕಿದ್ದಾರೆ.

ಯಶ್ ನಟನೆಯ ‘ಕೆಜಿಎಫ್’ (KGF) ಸಿನಿಮಾದಲ್ಲಿ ಹಾಡುಗಳು ಸಖತ್ ಸದ್ದು ಮಾಡಿದವು. ಹಿಂದಿ ವರ್ಷನ್​​ನಲ್ಲಿ ಇದ್ದ ‘ಗಲಿ ಗಲಿ ಮೇ..’ ಹಾಡಿನಲ್ಲಿ ನಟಿ ಮೌನಿ ರಾಯ್ ಅವರು ಭರ್ಜರಿಯಾಗಿ ಡ್ಯಾನ್ಸ್ ಮಾಡಿದ್ದರು. ಈಗ ವೇದಿಕೆಯಲ್ಲಿ ಕೂಡ ಮೌನಿ ರಾಯ್ ಅವರು ಈ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಈ ವಿಡಿಯೋವನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದೇ ರೀತಿ ಹಲವು ಸ್ಪೆಷಲ್ ಸಾಂಗ್​​ಗಳ ಮೂಲಕ ಮೌನಿ ರಾಯ್ (Mouni Roy) ಅವರು ಅಭಿಮಾನಿಗಳನ್ನು ರಂಜಿಸಿದ್ದಾರೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಅವರಿಗೆ ತುಂಬಾ ಬೇಡಿಕೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More