ಮಂಗಳೂರು-ಸೋಲಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತ, ಭಾರೀ ವಾಹನಗಳ ಸಂಚಾರದ ಮೇಲೆ ನಿರ್ಬಂಧ

ಅರುಣ್​ ಕುಮಾರ್​ ಬೆಳ್ಳಿ

Updated on: Jun 17, 2025 | 10:37 AM

ನಿರಂತರವಾಗಿ ಸುರಿಯುತ್ತಿರುವ ಮಳೆ ಮತ್ತು ಅಲ್ಲಲ್ಲಿ ಸಂಭವಿಸುತ್ತಿರುವ ಭೂಕುಸಿತದ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲಾಡಳಿತ ಸೋಲಾಪುರ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರೀ ವಾಹನಗಳ ಸಂಚಾರದ ಮೇಲೆ ನಿರ್ಬಂಧ ವಿಧಿಸಿದೆ. ವಾಹನ ಯಾವುದಾದರೇನು ಭೂಕುಸಿತ ಉಂಟಾಗುತ್ತಿದ್ದರೆ ವಾಹನಗಳು ಓಡಾಡುವುದು ಅಪಾಯಕಾರಿಯೇ. ವಾಹನ ಸವಾರರು ಪರಿಸ್ಥಿತಿಯನ್ನು ಅರ್ಥಮಾಡಿಕೊಳ್ಳಬೇಕು.

ಚಿಕ್ಕಮಗಳೂರು, ಜೂನ್ 17: ರಾಜ್ಯದಾದ್ಯಂತ ಮಳೆ ತನ್ನ ಪ್ರವರ ಮುಂದುವರಿಸಿದೆ. ಪಶ್ಚಿಮಘಟ್ಟ ಸಾಲು (Western Ghats Section), ಮಲೆನಾಡು ಮತ್ತು ಕರಾವಳಿ ಪ್ರದೇಶಗಳಲ್ಲಿ ಮಳೆ ಒಂದೇಸಮ ಸುರಿಯುತ್ತಿದೆ. ಚಿಕ್ಕಮಗಳೂರುನಲ್ಲಿ ಭಾರೀ ಮಳೆಯಾಗುತ್ತಿದ್ದು ಜಿಲ್ಲೆಯ ಶೃಂಗೇರಿ ತಾಲೂಕಿನಲ್ಲಿರುವ ಸಾಲ್ಮರ ಗ್ರಾಮದ ಮೂಲಕ ಹಾದುಹೋಗುವ ಸೊಲ್ಲಾಪುರ-ಮಂಗಳೂರು ರಾಷ್ಟ್ರೀಯ ಹೆದ್ದಾರಿ 169ರಲ್ಲಿ ಭೂಕುಸಿತ ಉಂಟಾಗಿದೆ. ದೃಶ್ಯಗಳಲ್ಲಿ ಮನೆಯೊಂದು ಭೂಕುಸಿತದಿಂದ ಅಪಾರ ಹಾನಿಗೊಳಗಾಗಿರುವುದನ್ನು ನೋಡಬಹುದು. ಯಾವುದೇ ಸಾವು ನೋವು ಸಂಭವಿಸದಿರುವುದು ಅದೃಷ್ಟ. ಕೆಲ ಅಧಿಕಾರಿಗಳು ಹಾನಿಗೊಳಗಾಗಿರುವ ಮನೆ ವೀಕ್ಷಿಸುತ್ತಿದ್ದಾರೆ.

ಇದನ್ನೂ ಓದಿ:  ಬೆಂಗಳೂರು ಮಂಗಳೂರು ವಾಹನ ಸವಾರರೇ ಗಮನಿಸಿ: ಶಿರಾಡಿ ಘಾಟ್ ರಸ್ತೆಯ ಹಲವೆಡೆ ಭೂಕುಸಿತ

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.