Video: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ, ಒಂದೇ ಕುಟುಂಬದ ನಾಲ್ವರು ಸಜೀವದಹನ

Updated on: May 28, 2026 | 12:21 PM

ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಕುಟುಂಬದ ನಾಲ್ವರು ಸಜೀವದಹನವಾಗಿರುವ ಘಟನೆ ರಾಜಸ್ಥಾನದ ಅಜ್ಮೀರ್ ಜಿಲ್ಲೆಯ ಬೊರಾಡಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಗುರುವಾರ ಬೆಳಗ್ಗೆ, ಗ್ರಾಮದ ಮಾಜಿ ಮುಖ್ಯಸ್ಥ, ಅವರ ಕುಟುಂಬ ಸದಸ್ಯರು ಮತ್ತು ಸ್ಥಳೀಯ ಜಿಲ್ಲಾ ಪರಿಷತ್ ಸದಸ್ಯರೊಬ್ಬರು ಪ್ರಯಾಣಿಸುತ್ತಿದ್ದ ಕಾರಿಗೆ ಹಠಾತ್ತನೆ ಬೆಂಕಿ ಹೊತ್ತಿಕೊಂಡ ಪರಿಣಾಮ ನಾಲ್ವರು ಸಾವನ್ನಪ್ಪಿದ್ದಾರೆ. ಮಾಜಿ ಸರಪಂಚ್ ರಾಮಸಿಂಗ್ ಚೌಧರಿ ಅವರು ತಮ್ಮ ಅನಾರೋಗ್ಯ ಪೀಡಿತ ತಾಯಿ ಮತ್ತು ಜಿಲ್ಲಾ ಪರಿಷತ್ ಸದಸ್ಯೆ ಪುಸಿ ದೇವಿ ಅವರಿಗೆ ಎದೆ ನೋವು ಕಾಣಿಸಿಕೊಂಡ ಪರಿಣಾಮ ಅವರನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದರು.

ಅಜ್ಮೀರ್, ಮೇ 28: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಕುಟುಂಬದ ನಾಲ್ವರು ಸಜೀವದಹನವಾಗಿರುವ ಘಟನೆ ರಾಜಸ್ಥಾನದ ಅಜ್ಮೀರ್ ಜಿಲ್ಲೆಯ ಬೊರಾಡಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಗುರುವಾರ ಬೆಳಗ್ಗೆ, ಗ್ರಾಮದ ಮಾಜಿ ಮುಖ್ಯಸ್ಥ, ಅವರ ಕುಟುಂಬ ಸದಸ್ಯರು ಮತ್ತು ಸ್ಥಳೀಯ ಜಿಲ್ಲಾ ಪರಿಷತ್ ಸದಸ್ಯರೊಬ್ಬರು ಪ್ರಯಾಣಿಸುತ್ತಿದ್ದ ಕಾರಿಗೆ ಹಠಾತ್ತನೆ ಬೆಂಕಿ ಹೊತ್ತಿಕೊಂಡ ಪರಿಣಾಮ ನಾಲ್ವರು ಸಾವನ್ನಪ್ಪಿದ್ದಾರೆ. ಮಾಜಿ ಸರಪಂಚ್ ರಾಮಸಿಂಗ್ ಚೌಧರಿ ಅವರು ತಮ್ಮ ಅನಾರೋಗ್ಯ ಪೀಡಿತ ತಾಯಿ ಮತ್ತು ಜಿಲ್ಲಾ ಪರಿಷತ್ ಸದಸ್ಯೆ ಪುಸಿ ದೇವಿ ಅವರಿಗೆ ಎದೆ ನೋವು ಕಾಣಿಸಿಕೊಂಡ ಪರಿಣಾಮ ಅವರನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದರು.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More