ಹಾಸನ: ಟೈರ್ ಸ್ಫೋಟಗೊಂಡು ಧಗಧಗನೆ ಹೊತ್ತಿ ಉರಿದ ಖಾಸಗಿ ಬಸ್, 36 ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು!
ಹಾಸನದ ಶಾಂತಿಗ್ರಾಮ ಬಳಿ ಚಲಿಸುತ್ತಿದ್ದ ಖಾಸಗಿ ಬಸ್‌ನ ಟೈರ್ ಸ್ಫೋಟಗೊಂಡು ಭಾರಿ ಅಗ್ನಿ ಅನಾಹುತ ಸಂಭವಿಸಿದೆ. ಚಾಲಕನ ಸಮಯಪ್ರಜ್ಞೆಯಿಂದ ಬಸ್‌ನಲ್ಲಿದ್ದ 36 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದು, ಲಗೇಜ್‌ಗಳು ಸುಟ್ಟು ಭಸ್ಮವಾಗಿವೆ. ಬಸ್ ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ. ಸ್ಥಳದಲ್ಲಿ ಕೆಲಹೊತ್ತು ಆತಂಕದ ಪರಿಸ್ಥಿತಿ ನಿರ್ಮಾಣವಾಗಿತ್ತು.
ಹಾಸನ, ಮೇ 16: ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ಸೊಂದರ ಟೈರ್ ಸ್ಫೋಟಗೊಂಡು ಅದಕ್ಕೆ ಬೆಂಕಿ ಹೊತ್ತಿಕೊಂಡ ಘಟನೆ ಹಾಸನ ತಾಲೂಕಿನ ಶಾಂತಿಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ. ಬಸ್‌ನಲ್ಲಿ ಸುಮಾರು 36 ಪ್ರಯಾಣಿಕರಿದ್ದು, ಟೈರ್ ಸ್ಫೋಟಗೊಳ್ಳುತ್ತಿದ್ದಂತೆಯೇ ಚಾಲಕ ತಕ್ಷಣವೇ ಜಾಗರೂಕತೆಯಿಂದ ಬಸ್ ನಿಲ್ಲಿಸಿ ಎಲ್ಲರನ್ನೂ ಕೆಳಗಿಳಿಸಿದ್ದರಿಂದ ಭಾರಿ ಅನಾಹುತ ತಪ್ಪಿದಂತಾಗಿದೆ. ಆದರೆ, ಬೆಂಕಿಯ ತೀವ್ರತೆ ಹೆಚ್ಚಾಗಿದ್ದರಿಂದ ಪ್ರಯಾಣಿಕರ ಲಗೇಜ್‌ಗಳು, ಮೊಬೈಲ್‌ಗಳು ಹಾಗೂ ಬೆಲೆಬಾಳುವ ವಸ್ತುಗಳು ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿವೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣ ಧಾವಿಸಿದ್ದು, ಕಾರ್ಯಾಚರಣೆ ನಡೆಸಿದ್ದಾರೆ. ಕೂದಲೆಳೆ ಅಂತರದಲ್ಲಿ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದು, ಹೆದ್ದಾರಿಯಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published on: May 16, 2026 07:38 AM
ಬಿಹಾರದಲ್ಲಿ 21 ಜನರಿದ್ದ ದೋಣಿ ಮಗುಚಿ ಇಬ್ಬರು ನಾಪತ್ತೆ; ವಿಡಿಯೋ ಇಲ್ಲಿದೆ
‘ಹೇಗಿದೆ ಟಾಕ್ಸಿಕ್?’ ಕಲೆಕ್ಷನ್, ವಿಮರ್ಶೆ ಇತ್ಯಾದಿ: ವಿಡಿಯೋ ನೋಡಿ
ನೇಪಾಳ-ಟಿಬೆಟ್ ಗಡಿಯಲ್ಲಿ ಪ್ರವಾಹಕ್ಕೆ ಕೊಚ್ಚಿಹೋಯ್ತು ತ್ರಿಶೂಲಿ ನದಿ ಸೇತುವೆ
ಏಕಾಏಕಿ ಹೊತ್ತಿ ಉರಿದ ಕಾರು: ಕನ್ಯೆ ನೋಡಲು ಹೋಗಿದ್ದವ ಪ್ರಾಣಾಪಾಯದಿಂದ ಪಾರು

