ಪೆಟ್ರೋಲ್ ಸಾಗಿಸುತ್ತಿದ್ದ ಟ್ಯಾಂಕರ್​​ಗೆ ಬೆಂಕಿ, ರಸ್ತೆ ಪಕ್ಕದ ಅರಣ್ಯಕ್ಕೂ ಅವರಿಸಿದ ಜ್ವಾಲೆ

Edited By:

Updated on: Apr 16, 2026 | 5:14 PM

ಪೆಟ್ರೋಲ್ ಸಾಗಿಸುತ್ತಿದ್ದ ಟ್ಯಾಂಕರ್​​ನಲ್ಲಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಕಂಚಿನಾಬಾಗಿಲು ಬಳಿಯ ರಾಷ್ಟ್ರೀಯ ಹೆದ್ದಾರಿ 52 ರಲ್ಲಿ ನಡೆದಿದೆ. ಮಂಗಳೂರಿನಿಂದ ಹುಬ್ಬಳ್ಳಿಗೆ ತೆರಳುತ್ತಿದ್ದ ಪೆಟ್ರೋಲ್ ತುಂಬಿದ್ದ ಟ್ಯಾಂಕರ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಮೊದಲೇ ಪೆಟ್ರೋಲ್ ಇದ್ದಿದ್ದರಿಂದ ನೋಡ ನೋಡುತ್ತಿದ್ದಂತೇ ಟ್ಯಾಂಕರ್ ಹೊತ್ತಿ ಉರಿದಿದೆ. ಅಲ್ಲದೇ ಬೆಂಕಿಯ ಜ್ವಾಲೆ ರಸ್ತೆ ಪಕ್ಕದ ಅರಣ್ಯಕ್ಕೂ ವ್ಯಾಪಿಸಿದ್ದು, ಬೆಂಕಿ ನಂದಿಸಲು ಆಗ್ನಿಶಾಮಕ ಸಿಬ್ಬಂದಿ ಹರಸಾಹಸಪಡುತ್ತಿದ್ದಾರೆ.

ಕಾರವಾರ, ಏಪ್ರಿಲ್ 16): ಪೆಟ್ರೋಲ್ ಸಾಗಿಸುತ್ತಿದ್ದ ಟ್ಯಾಂಕರ್​​ನಲ್ಲಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿರುವ ಘಟನೆ ಉತ್ತರ ಕನ್ನಡ (Uttara Kannada) ಜಿಲ್ಲೆಯ ಅಂಕೋಲಾ ತಾಲೂಕಿನ ಕಂಚಿನಾಬಾಗಿಲು ಬಳಿಯ ರಾಷ್ಟ್ರೀಯ ಹೆದ್ದಾರಿ 52 ರಲ್ಲಿ ನಡೆದಿದೆ. ಮಂಗಳೂರಿನಿಂದ ಹುಬ್ಬಳ್ಳಿಗೆ ತೆರಳುತ್ತಿದ್ದ ಪೆಟ್ರೋಲ್ ತುಂಬಿದ್ದ ಟ್ಯಾಂಕರ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಮೊದಲೇ ಪೆಟ್ರೋಲ್ ಇದ್ದಿದ್ದರಿಂದ ನೋಡ ನೋಡುತ್ತಿದ್ದಂತೇ ಟ್ಯಾಂಕರ್ ಹೊತ್ತಿ ಉರಿದಿದೆ. ಅಲ್ಲದೇ ಬೆಂಕಿಯ ಜ್ವಾಲೆ ರಸ್ತೆ ಪಕ್ಕದ ಅರಣ್ಯಕ್ಕೂ ವ್ಯಾಪಿಸಿದ್ದು, ಬೆಂಕಿ ನಂದಿಸಲು ಆಗ್ನಿಶಾಮಕ ಸಿಬ್ಬಂದಿ ಹರಸಾಹಸಪಡುತ್ತಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಸೂರಜ್​, ಮಹಾವೀರ್​ ಉತ್ತುರೆ

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನವಲಿಹಾಳ ಗ್ರಾಮದ ಸೂರಜ ಉತ್ತೂರೆ. ಕಸ್ತೂರಿ ವಾಹಿನಿಯಲ್ಲಿ ರಾಜಕೀಯ ವರದಿಗಾರನಾಗಿ ಪತ್ರಿಕೊದ್ಯಮ ಪ್ರವೇಶಿಸಿದ ಇವರು. ಡಿಸೆಂಬರ್ 2022 ರಂದು ಹಾವೇರಿ ಜಿಲ್ಲೆ tv9 ವರದಿಗಾರನಾಗಿ ಕೆಲಸ ಆರಂಭಿಸಿದ್ರು ನವೆಂಬರ್ 2023 ರಂದು ಉತ್ತರ ಕನ್ನಡ ಜಿಲ್ಲೆಗೆ ವರ್ಗಾವಣೆ ಆಗಿದ್ದೂ ಸದ್ಯ ಉತ್ತರ ಕನ್ನಡ ಜಿಲ್ಲೆಯ tv9 ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ.

Read More