ಬಂಟ್ವಾಳದಲ್ಲಿ ನಡೆದ ಅಭಿನಂದನಾ ಸಮಾರಂಭದಲ್ಲಿ ಮಾತಾಡುವಾಗ ಸಂಸದ ನಳಿನ್ ಕುಮಾರ್ ಕಟೀಲ್ ಭಾವುಕರಾದರು
ಅವರ ಮಾತುಗಳನ್ನು ಕೇಳುತ್ತಿದ್ದರೆ, ಮುಂದಿನ ಲೋಕಸಭಾ ಚುನಾವಣೆಯಲ್ಲಿ ತಮಗೆ ಟಿಕೆಟ್ ಸಿಗಲಾರದೆಂಬ ಅನುಮಾನ ಅವರಲ್ಲಿ ಹುಟ್ಟಿಕೊಂಡಂತಿದೆ. ಆದರೆ ಅದನ್ನು ಸ್ಪೋರ್ಟ್ ಆಗಿ ಸ್ವೀಕರಿಲು ತಯಾರಿರುವ ಅವರು, ಹೈಕಮಾಂಡ್ ಯಾರಿಗೇ ಟಿಕೆಟ್ ನೀಡಿದರೂ ಅವರ ಗೆಲುವಿಗಾಗಿ ಶ್ರಮಿಸುವ ಭರವಸೆ ನೀಡಿದರು. ರಾಜ್ಯಾಧ್ಯಕ್ಷನಾಗಿದ್ದ ಸಮಯದಲ್ಲಿ ಒಬ್ಬ ಸಂಸದನ ಕಾರ್ಯವನ್ನು ಸರಿಯಾಗಿ ನಿಭಾಯಿಸಲಾಗದಕ್ಕೆ ಕಟೀಲ್ ವಿಷಾದ ವ್ಯಕ್ತಪಡಿಸಿದರು.
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಆಯೋಜಿಸಲಾಗಿದ್ದ ಅಭಿನಂದನಾ ಸಮಾರಂಭದಲ್ಲಿ (felicitation programme) ಮಾತಾಡುವಾಗ ಸಂಸದ ನಳಿನ್ ಕುಮಾರ್ ಕಟೀಲ್ (Nalin Kumar Kateel) ಭಾವುಕರಾದರು. ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದ ಅವಧಿಯಲ್ಲಿ ತಮ್ಮ ವಿರುದ್ಧ ಮಾಡಿದ ಟೀಕೆಗಳನ್ನು ಮತ್ತು ಆದಂಥ ಅವಮಾನಗಳನ್ನು ಬಿಜೆಪಿಯ ವಿಚಾರಧಾರೆಯನ್ನು ಒಪ್ಪಿ ಅಪ್ಪಿಕೊಂಡಿರುವ ಕಾರಣ ಮೌನವಾಗಿ ಸಹಿಸಿಕೊಂಡಿದ್ದೇನೆ ಅಂತ ಅವರು ಹೇಳಿದಾಗ ಕಣ್ಣುಗಳಿಂದ ನೀರು ಸುರಿಯಿತು. ಪಕ್ಷದ ರಾಜ್ಯಾಧ್ಯಕ್ಷನಾಗಿ ಕೆಲಸ ಮಾಡಿದ್ದನ್ನು ಮತ್ತು ಆ ಅವಧಿಯಲ್ಲಿ ಎದುರಿಸಿದ್ದ ಸಮಸ್ಯೆಗಳನ್ನು ಅವರು ಅವೇಶದಲ್ಲಿ ಹೇಳಿದರು. ಅವರ ಮಾತುಗಳನ್ನು ಕೇಳುತ್ತಿದ್ದರೆ, ಮುಂದಿನ ಲೋಕಸಭಾ ಚುನಾವಣೆಯಲ್ಲಿ ತಮಗೆ ಟಿಕೆಟ್ ಸಿಗಲಾರದೆಂಬ ಅನುಮಾನ ಅವರಲ್ಲಿ ಹುಟ್ಟಿಕೊಂಡಂತಿದೆ. ಆದರೆ ಅದನ್ನು ಸ್ಪೋರ್ಟ್ ಆಗಿ ಸ್ವೀಕರಿಲು ತಯಾರಿರುವ ಅವರು, ಹೈಕಮಾಂಡ್ ಯಾರಿಗೇ ಟಿಕೆಟ್ ನೀಡಿದರೂ ಅವರ ಗೆಲುವಿಗಾಗಿ ಶ್ರಮಿಸುವ ಭರವಸೆ ನೀಡಿದರು. ರಾಜ್ಯಾಧ್ಯಕ್ಷನಾಗಿದ್ದ ಸಮಯದಲ್ಲಿ ಒಬ್ಬ ಸಂಸದನ ಕಾರ್ಯವನ್ನು ಸರಿಯಾಗಿ ನಿಭಾಯಿಸಲಾಗದಕ್ಕೆ ಕಟೀಲ್ ವಿಷಾದ ವ್ಯಕ್ತಪಡಿಸಿದರು. ಕ್ಷೇತ್ರದ ಎಲ್ಲ ಗ್ರಾಮಗಳನ್ನು ಭೇಟಿ ನೀಡುವವುದರ ಜೊತೆಗೆ ರಾಜ್ಯದೆಲ್ಲಡೆ ಪ್ರವಾಸ ಮಾಡಿ ಬಿಜೆಪಿಯನ್ನು ಗೆಲ್ಲಿಸುವುದು ತಮ್ಮ ಗುರಿಯಾಗಿದೆ ಎಂದು ಕಟೀಲ್ ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ