ಹೊಳೆನರಸೀಪುರದ ರಥೋತ್ಸವ ನಡೆಯುವಾಗ ಸ್ಥಳೀಯ ಯುವಕರಿಂದ ಬಣ್ಣ ಹಚ್ಚಿಸಿಕೊಳ್ಳಲು ಪ್ರಜ್ವಲ್ ರೇವಣ್ಣ ನಿರಾಕರಿಸಿದರು

ಅರುಣ್​ ಕುಮಾರ್​ ಬೆಳ್ಳಿ

Updated on: Mar 07, 2023 | 12:27 PM

ದೇಶದಾದ್ಯಂತ ಇಂದು ರಂಗಿನ ಹಬ್ಬ ಹೋಳಿಯನ್ನು ಆಚರಿಸಲಾಗುತ್ತಿರುವ ಹಿನ್ನೆಲೆಯಲ್ಲಿ ಸ್ಥಳೀಯರು ಪ್ರಜ್ವಲ್ ರೇವಣ್ಣಗೆ ಬಣ್ಣ ಹಚ್ಚಲು ಮುಂದಾದಾಗ ಅವರು ಹಚ್ಚಿಸಿಕೊಳ್ಳಲು ನಿರಾಕರಿಸಿದರು.

ಹಾಸನ: ಹೆಚ್ ಡಿ ರೇವಣ್ಣನವರ (HD Revanna) ಕ್ಷೇತ್ರವಾಗಿರುವ ಹೊಳೆನರಸೀಪುರದಲ್ಲಿ ಇಂದು ಲಕ್ಷ್ಮಿ ರಥೋತ್ಸವ ನಡೆಯುತ್ತಿರುವ ಲಕ್ಷ್ಮಿನರಸಿಂಹಸ್ವಾಮಿ ದೇವಸ್ಥಾನದ ರಥೋತ್ಸವ ನಡೆಯುತ್ತಿದೆ. ರೇವಣ್ಣನವರು ಪತ್ನಿ ಭವಾನಿ (Bhavani) ಮತ್ತು ಸಂಸದರೂ ಆಗಿರುವ ಅವರ ಮಗ ಪ್ರಜ್ವಲ್ ರೇವಣ್ಣನವರೊಂದಿಗೆ (Prajwal Revanna) ಪೂಜಾವಿಧಿಗಳಲ್ಲಿ ಭಾಗಿಯಾಗಿದ್ದರು. ಕುಟುಂಬದ ಪರವಾಗಿ ರೇವಣ್ಣನವರು ಲಕ್ಷ್ಮಿನರಸಿಂಹ ಸ್ವಾಮಿಗೆ ವಿಶೇಷ ಪೂಜೆಯನ್ನು ಸಲ್ಲಿಸಿದರು. ದೇಶದಾದ್ಯಂತ ಇಂದು ರಂಗಿನ ಹಬ್ಬ ಹೋಳಿಯನ್ನು ಆಚರಿಸಲಾಗುತ್ತಿರುವ ಹಿನ್ನೆಲೆಯಲ್ಲಿ ಸ್ಥಳೀಯರು ಪ್ರಜ್ವಲ್ ರೇವಣ್ಣಗೆ ಬಣ್ಣ ಹಚ್ಚಲು ಮುಂದಾದಾಗ ಅವರು ಹಚ್ಚಿಸಿಕೊಳ್ಳಲು ನಿರಾಕರಿಸಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Mar 07, 2023 12:27 PM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.