ಸಂಸದ ಪ್ರಜ್ವಲ್ ರೇವಣ್ಣನನ್ನ ವಶಕ್ಕೆ ಪಡೆದ ಎಸ್ಐಟಿ ಅಧಿಕಾರಿಗಳು
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಪ್ರಜ್ವಲ್ ರೇವಣ್ಣನನ್ನು ಎಸ್ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. 34 ದಿನಗಳ ಕಳ್ಳಾಟಕ್ಕೆ ಬ್ರೇಕ್ ಬಿದ್ದಿದೆ. ಇವತ್ತು ಬರ್ತೀನಿ, ನಾಳೆ ಬರ್ತೀನಿ ಎಂದು ಕಣ್ಣಾಮುಚ್ಚಾಲೆ ಆಟ ಬಂದ್ ಆಗಿದೆ. ಅತ್ಯಾಚಾರ ಆರೋಪಿ ಪ್ರಜ್ವಲ್ (Prajwal Revanna)ನನ್ನು ಕೊನೆಗೂ ಎಸ್ಐಟಿ ಅಧಿಕಾರಿಗಳು ವಶಕ್ಕೆ ಪಡೆದು ಎಸ್ಐಟಿ ಕಛೇರಿಗೆ ಕರೆದುಕೊಂಡು ಹೋಗಿದ್ದಾರೆ.
ಬೆಂಗಳೂರು, ಮೇ.31: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಪ್ರಜ್ವಲ್ ರೇವಣ್ಣನನ್ನು ಎಸ್ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. 34 ದಿನಗಳ ಕಳ್ಳಾಟಕ್ಕೆ ಬ್ರೇಕ್ ಬಿದ್ದಿದೆ. ಇವತ್ತು ಬರ್ತೀನಿ, ನಾಳೆ ಬರ್ತೀನಿ ಎಂದು ಕಣ್ಣಾಮುಚ್ಚಾಲೆ ಆಟ ಬಂದ್ ಆಗಿದೆ. ಅತ್ಯಾಚಾರ ಆರೋಪಿ ಪ್ರಜ್ವಲ್ (Prajwal Revanna)ನನ್ನು ಕೊನೆಗೂ ಎಸ್ಐಟಿ ಅಧಿಕಾರಿಗಳು ವಶಕ್ಕೆ ಪಡೆದು ಎಸ್ಐಟಿ ಕಛೇರಿಗೆ ಕರೆದುಕೊಂಡು ಹೋಗಿದ್ದಾರೆ. ಈಗಾಗಲೇ ಜನಪ್ರತಿನಿಧಿಗಳ ಕೋರ್ಟ್ ಅರೆಸ್ಟ್ ವಾರಂಟ್ ಜಾರಿ ಮಾಡಿದ್ದು, ಈ ಹಿನ್ನೆಲೆ ಏರ್‌ಪೋರ್ಟ್‌ನಲ್ಲಿ ಬಂಧಿಸಲಾಗಿದೆ. ಕೆಐಎಬಿಗೆ ಬರುತ್ತಿದ್ದಂತೆ ಇಮಿಗ್ರೇಷನ್ ಅಧಿಕಾರಿಗಳಿಂದ ರಾಜತಾಂತ್ರಿಕ ಪಾಸ್‌ಪೋರ್ಟ್ ಸೇರಿ ಕೆಲ ದಾಖಲಾತಿಗಳ ಪರಿಶೀಲನೆ ಮಾಡಿ, ಬಳಿಕ SITಗೆ ವಶಕ್ಕೆ ಪಡೆದಿದೆ.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

