Toll collection row: ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ ವೇಯಲ್ಲಿ ಟೋಲ್ ಸಂಗ್ರಹಣೆ ಸರಿ ಎಂದ ಸಂಸದ ಪ್ರತಾಪ್ ಸಿಂಹ

|

Updated on: Mar 15, 2023 | 7:24 PM

ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇಯನ್ನು ನಾಲ್ಕು ಚಕ್ರವಾಹನಗಳು ಮತ್ತು ಭಾರೀ ವಾಹನಗಳಿಗಾಗಿ ಪ್ರಯಾಣದ ಸಮಯವನ್ನು ಗಣನೀಯವಾಗಿ ತಗ್ಗಿಸಲು ನಿರ್ಮಿಸಲಾಗಿದೆ. ತ್ರಿಚಕ್ರ ಮತ್ತು ದ್ವಿಚಕ್ರ ವಾಹನಗಳಿಗೆ ಸರ್ವಿಸ್ ರಸ್ತೆಗಳನ್ನು ಶೀಘ್ರದಲ್ಲೇ ನಿರ್ಮಿಸಲಾಗುವುದು ಎಂದು ಸಂಸದ ಹೇಳಿದರು.

ದೆಹಲಿ: ಬೆಂಗಳೂರು ಮತ್ತು ಮೈಸೂರು ನಡುವಿನ ನೂತನ ಎಕ್ಸ್ ಪ್ರೆಸ್ ವೇ ನಲ್ಲಿ (expressway) ಟೋಲ್ ಸಂಗ್ರಹಿಸುತ್ತಿರುವುದನ್ನು ಸಂಸದ ಪ್ರತಾಪ್ ಸಿಂಹ (Pratap Simha) ಸಮರ್ಥಿಸಿಕೊಂಡಿದ್ದಾರೆ. ದೆಹಲಿಯಲ್ಲಿ ಇದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಸಂಸದರು ಕೇವಲ ಭಾರತ ಮಾತ್ರವಲ್ಲ ವಿಶ್ವದ ಯಾವುದೇ ಮೂಲೆಗೆ ಹೋದರೂ ಹೆದ್ದಾರಿಗಳಲ್ಲಿ ಟೋಲ್ ಸಂಗ್ರಹಣೆ (toll fee collection) ಆಗುತ್ತದೆ ಎಂದರು. ಹಿಂದಿನ ಸರ್ಕಾರಗಳಲ್ಲಿ ಲೋಕೋಪಯೋಗಿ ಇಲಾಖೆ (PWD) ನಿರ್ಮಿಸಿದ ಹೆದ್ದಾರಿಗಳಲ್ಲೂ ಟೋಪ್ ಪ್ಲಾಜಾಗಳನ್ನು ಸ್ಥಾಪಿಸಿ ಟೋಲ್ ಕಲೆಕ್ಟ್ ಮಾಡಲಾಗುತ್ತಿದೆ ಎಂದು ಸಂಸದರು ಹೇಳಿದರು. ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇಯನ್ನು ನಾಲ್ಕು ಚಕ್ರವಾಹನಗಳು ಮತ್ತು ಭಾರೀ ವಾಹನಗಳಿಗಾಗಿ ಪ್ರಯಾಣದ ಸಮಯವನ್ನು ಗಣನೀಯವಾಗಿ ತಗ್ಗಿಸಲು ನಿರ್ಮಿಸಲಾಗಿದೆ. ತ್ರಿಚಕ್ರ ಮತ್ತು ದ್ವಿಚಕ್ರ ವಾಹನಗಳಿಗೆ ಸರ್ವಿಸ್ ರಸ್ತೆಗಳನ್ನು ಶೀಘ್ರದಲ್ಲೇ ನಿರ್ಮಿಸಲಾಗುವುದು ಎಂದು ಅವರು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us on