Bengaluru; ಜೆಡಿಎಸ್ ಪಕ್ಷದೊಂದಿಗೆ ಪ್ರತಾಪ್ ಸಿಂಹ ಹೊಂದಾಣಿಕೆ ಮಾಡಿಕೊಂಡಿದ್ದು ಎಲ್ಲರಿಗೂ ಗೊತ್ತಿರುವ ಸಂಗತಿ: ಎಂಪಿ ರೇಣುಕಾಚಾರ್ಯ

ಅರುಣ್​ ಕುಮಾರ್​ ಬೆಳ್ಳಿ

Updated on: Jul 01, 2023 | 3:15 PM

ಪ್ರತಾಪ್​ ಸಿಂಹ ಒಬ್ಬ ಅಡ್ಜಸ್ಟ್ ಮೆಂಟ್ ರಾಜಕಾರಣಿ ಅಂತ ಬಹಳ ಜನರಿಗೆ ಗೊತ್ತಿದೆ ಎಂದು ರೇಣುಕಾಚಾರ್ಯ ಹೇಳಿದರು.

ಬೆಂಗಳೂರು: ಮಾಜಿ ಶಾಸಕ ಎಂಪಿ ರೇಣುಕಾಚಾರ್ಯ (MP Renukacharya) ತಮ್ಮ ಪಕ್ಷದ ಕೆಲ ನಾಯಕರ ವಿರುದ್ಧ ಸಮರ ಸಾರಿದ್ದಾರೆ ಮತ್ತು ಅವರು ವಾಗ್ದಾಳಿ ನಿಲ್ಲುವ ಲಕ್ಷಣಗಳು ಕಾಣಿಸುತ್ತಿಲ್ಲ. ಹಿರಿಯ ನಾಯಕ ಬಿಎಸ್ ಯಡಿಯೂರಪ್ಪರೊಂದಿಗೆ (BS Yediyurappa) ಮಾತಾಡಿ ಬಂದ ಬಳಿಕವೂ ಅವರು ಪಕ್ಷದ ಕೆಲ ನಾಯಕರನ್ನು ಗುರಿ ಮಾಡಿ ಕಿಡಿ ಕಾರಿದರು. ಇಂದು ಮೈಸೂರು ಸಂಸದ ಪ್ರತಾಪ್ ಸಿಂಹರನ್ನು (Pratap Simha) ಟಾರ್ಗೆಟ್ ಮಾಡಿ ರೇಣುಕಾಚಾರ್ಯ ಮಾತಾಡಿದರು. ಪ್ರತಾಪ್ ಸಿಂಹ ಮೈಸೂರಲ್ಲಿ ಜೆಡಿಎಸ್ ಪಕ್ಷದೊಂದಿಗೆ ಹೊಂದಾಣಿಕೆ ಮಾಡಿಕೊಂಡು ಚುನಾವಣೆಯಲ್ಲಿ ಗೆದ್ದಿದ್ದು ಯಾರಿಗೆ ಗೊತ್ತಿಲ್ಲ? ಅವರೊಬ್ಬ ಅಡ್ಜಸ್ಟ್ ಮೆಂಟ್ ರಾಜಕಾರಣಿ ಅಂತ ಬಹಳ ಜನರಿಗೆ ಗೊತ್ತಿದೆ ಎಂದು ರೇಣುಕಾಚಾರ್ಯ ಹೇಳಿದರು. ರಾಜ್ಯದಲ್ಲಿ ಪಕ್ಷವನ್ನು ಕಟ್ಟಿ ಬೆಳೆಸಿದ ಬಿಎಸ್ ಯಡಿಯೂರಪ್ಪನವರ ಬಗ್ಗೆ ಟೀಕೆ ಮಾಡಲು ಇವರಱರಿಗೂ ನೈತಿಕ ಹಕ್ಕಿಲ್ಲ ಎಂದ ಅವರು ರಾಜ್ಯದಲ್ಲಿ ಪಕ್ಷದ ಸೋಲಿಗೆ ಒಳಮೀಸಲಾತಿ, ಓಪಿಎಸ್ ನೌಕರರು ಮತ್ತು 10 ಕೆಜಿ ಅಕ್ಕಿ ಕೊಡದೆ ಹೋಗಿದ್ದು ಕಾರಣ ಎಂದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.