[lazy-load-videos-and-sticky-control id=”1MjbI_kHt7k”]
ದಾವಣಗೆರೆ: ಹೊನ್ನಾಳಿ ಶಾಸಕ ಎಂ.ಪಿ. ರೇಣುಕಾಚಾರ್ಯ ಕೋವಿಡ್ ಕೇರ್ ಸೆಂಟರ್ನಲ್ಲಿರುವ ಕೊರೊನಾ ಸೋಂಕಿತರು ಹಾಗೂ ಆಸ್ಪತ್ರೆ ಸಿಬ್ಬಂದಿಗೆ ಹೋಳಿಗೆ ಊಟ ಬಡಿಸಿದ್ದಾರೆ.
ಸಿಎಂ ರಾಜಕೀಯ ಕಾರ್ಯದರ್ಶಿ ಹಾಗೂ ಹೊನ್ನಾಳಿ ಬಿಜೆಪಿ ಶಾಸಕರಾಗಿರುವ ಎಂ.ಪಿ. ರೇಣುಕಾಚಾರ್ಯ, ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಮಾದನಬಾವಿಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ನಿಲಯದ ಕೋವಿಡ್ ಕೇರ್ ಸೆಂಟರ್ ಹಾಗೂ ಹೊನ್ನಾಳಿ ಸರ್ಕಾರಿ ಆಸ್ಪತ್ರೆ ಸಿಬ್ಬಂದಿ ಮತ್ತು ಕೊರೊನಾ ಸೋಕಿಂತರು ಸೇರಿದಂತೆ 150 ಜನರಿಗೆ ಹೋಳಿಗೆ ಊಟ ಬಡಿಸಿ, ಆತ್ಮಸ್ಥೈರ್ಯ ತುಂಬಿದ್ದಾರೆ.
ಕ್ವಾರನ್ಟೈನ್ನಲ್ಲಿದ್ದುಕೊಂಡೇ ಗೌರಿ-ಗಣೇಶ ಹಬ್ಬ ಆಚರಿಸಿ, ಹೋಳಿಗೆ ಊಟ ಮಾಡಿದ ಸೋಂಕಿತರು ಹಾಗೂ ಆಸ್ಪತ್ರೆ ಸಿಬ್ಬಂದಿಗಳು, ಎಂ.ಪಿ. ರೇಣುಕಾಚಾರ್ಯ ಕಾರ್ಯಕ್ಕೆ ಕೃತಜ್ಞತೆ ಸಲ್ಲಿಸಿದರು.
Published On - 3:58 pm, Tue, 25 August 20