ನಾನು ಓಡಿ ಹೋಗುವ ರಾಜಕಾರಣಿ ಅಲ್ಲ: ಭೈರತಿ ಸುರೇಶ್​ಗೆ ಶೋಭಾ ತಿರುಗೇಟು

ನಾನು ಓಡಿ ಹೋಗುವ ರಾಜಕಾರಣಿ ಅಲ್ಲ: ಭೈರತಿ ಸುರೇಶ್​ಗೆ ಶೋಭಾ ತಿರುಗೇಟು

ವಿವೇಕ ಬಿರಾದಾರ
|

Updated on: Oct 21, 2024 | 12:59 PM

ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಪತ್ನಿ ಮೈತ್ರಾದೇವಿ ಅವರ ಸಾವಿನಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಅವರ ಪಾತ್ರವಿದೆ. ಈ ಬಗ್ಗೆ ತನಿಖೆಯಾಗಲಿ ಎಂದು ಸಚಿವ ಭೈರತಿ ಸುರೇಶ್​ ಆರೋಪಿಸಿದ್ದರು. ಇದಕ್ಕೆ ಶೋಭಾ ಕರಂದ್ಲಾಜೆ ತಿರುಗೇಟು ನೀಡಿದ್ದಾರೆ.

ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ (BS Yediyurappa) ಪತ್ನಿ ಮೈತ್ರಾದೇವಿ ಅವರ ಸಾವಿನಲ್ಲಿ ಸಂಸದೆ ಶೋಭಾ ಕರಂದ್ಲಾಜೆ (Shobha Karandlaje) ಅವರ ಪಾತ್ರವಿದೆ ಎಂದು ನನಗೆ ಅನುಮಾನವಿದೆ. ಈ ಬಗ್ಗೆ ತನಿಖೆಯಾಗಲಿ ಎಂದು ಸಚಿವ ಭೈರತಿ ಸುರೇಶ್ (Byrathi Suresh)​ ಹೇಳಿದ್ದರು. ಇದಕ್ಕೆ ಸಂಸದೆ ಶೋಭಾ ಕರಂದ್ಲಾಜೆ ತಿರುಗೇಟು ನೀಡಿದ್ದಾರೆ. ದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಾನು ಓಡಿ ಹೋಗುವ ರಾಜಕಾಣಿಯಲ್ಲ. ನಿಮ್ಮನ್ನು ಹೆಬ್ಬಾಳದಿಂದ ಓಡಿಸುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೌರವರನ್ನು ಶಕುನಿ ಮುಗಿಸಿದ ಹಾಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮುಗಿಸಲೆಂದೇ ಭೈರತಿ ಸುರೇಶ್ ಇದ್ದಾರೆ. ಭೈರತಿ ಸುರೇಶ್​ ಭಯದಿಂದ ಇಂತಹ ಆರೋಪ ಮಾಡಿದ್ದಾರೆ. ಸಿದ್ದರಾಮಯ್ಯ ಪುತ್ರ ರಾಕೇಶ್​ ಸಾವಿಗೆ ಭೈರತಿ ಸುರೇಶ್​ ಕಾರಣ ಅಂತ ಜನ ಮಾತನಾಡಿಕೊಳ್ಳುತ್ತಿದ್ದಾರೆ. ನಾನು ಆ ಮಾತನ್ನು ಹೇಳಲಾ? ನಾಲಿಗೆ ಬಿಗಿ‌ ಹಿಡಿದು ಮಾತನಾಡಿ. ಇವರು ಸಿದ್ದರಾಮಯ್ಯ ಅವರ ಕುಟುಂಬಕ್ಕೆ ಕಳಂಕ ತಂದವರು. ಕೆಳಮಟ್ಟದ ರಾಜಕಾರಣ ಮಾಡುವುದನ್ನು ಬಿಡಿ ಎಂದು ವಾಗ್ದಾಳಿ ಮಾಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ