ಮಹಿಷಾ ದಸರಾ ಆಚರಣೆ ಬಗ್ಗೆ ಸಂಸದ ಯದುವೀರ್ ಏನಂದ್ರು ಗೊತ್ತಾ?
ಮಹಿಷಾ ದಸರಾ ಆಚರಣೆ ವಿಚಾರ ಕುರಿತು ಮೈಸೂರಿನಲ್ಲಿ ಮಾತನಾಡಿದ ಸಂಸದ ಯದುವೀರ್, ‘ಯಾವುದೇ ಭಾವನೆಗೆ ಧಕ್ಕೆಯಾಗದ ರೀತಿ ಆಚರಣೆ ಮಾಡಲಿ. ಸಂವಿಧಾನ ದೃಷ್ಟಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಾಡಿದರೆ ತೊಂದರೆ ಇಲ್ಲ. ಯಾರಿಗೂ ಯಾವುದೇ ರೀತಿಯ ಹಾನಿಯಾಗದೆ ರೀತಿ ಕಾರ್ಯಕ್ರಮ ಮಾಡಿಕೊಳ್ಳಬಹುದು ಎಂದರು.
ಮೈಸೂರು, ಸೆ.22: ಮಹಿಷಾ ದಸರಾ ಆಚರಣೆ ವಿಚಾರ ಕುರಿತು ಮೈಸೂರಿನಲ್ಲಿ ಮಾತನಾಡಿದ ಸಂಸದ ಯದುವೀರ್, ‘ಯಾವುದೇ ಭಾವನೆಗೆ ಧಕ್ಕೆಯಾಗದ ರೀತಿ ಆಚರಣೆ ಮಾಡಲಿ. ಸಂವಿಧಾನ ದೃಷ್ಟಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಾಡಿದರೆ ತೊಂದರೆ ಇಲ್ಲ. ಯಾರಿಗೂ ಯಾವುದೇ ರೀತಿಯ ಹಾನಿಯಾಗದೆ ರೀತಿ ಕಾರ್ಯಕ್ರಮ ಮಾಡಿಕೊಳ್ಳಬಹುದು. ಅದನ್ನು ಯಾರು ನಿಲ್ಲಿಸಲು ಸಾಧ್ಯವಿಲ್ಲ ಎಂದರು. ಇದೇ ವೇಳೆ ಚಾಮುಂಡಿ ಬೆಟ್ಟದಲ್ಲಿ ಮಹಿಷನ ಪ್ರತಿಮೆಗೆ ಪುಷ್ಪಾರ್ಚನೆಗೆ ಅವಕಾಶ ಮಾಡಿಕೊಡಬೇಕೆಂಬ ಬೇಡಿಕೆ ವಿಚಾರಕ್ಕೆ ಸಂಬಂಧಿಸಿ, ‘ಯಾಕೆ ಅಲ್ಲಿ?. ಅದು ಚಾಮುಂಡೇಶ್ವರಿ ತಾಯಿ ಕ್ಷೇತ್ರ
ಜಿಲ್ಲಾಡಳಿತ ಇದರ ಬಗ್ಗೆ ಕ್ರಮ ತೆಗೆದುಕೊಳ್ಳಲಿ. ಪದ್ದತಿ ಏನಿದೆ, ಧರ್ಮದಲ್ಲಿ ನಾವು ಏನು ಅನುಸರಿಸುತ್ತೇವೆ, ನಮ್ಮ ನಂಬಿಕೆ ಏನಿದೆ ಅದಕ್ಕೆ ಧಕ್ಕೆ ಬರಬಾರದು. ಅಧಿಕಾರಿಗಳು ಸೂಕ್ತ ಕ್ರಮ ತೆಗೆದುಕೊಳ್ಳಲಿ. ಜವಾಬ್ದಾರಿಯುತ ಪ್ರತಿನಿಧಿಗಳಾದ ನಾವು ಅಧಿಕಾರಿಗಳಿಗೆ ಬೆಟ್ಟದಲ್ಲಿ ಏನು ಪರಂಪರೆ ಇದೆ ಮತ್ತು ನಮ್ಮ ನಂಬಿಕೆ ಏನು ಇದೆ ಅದನ್ನ ವ್ಯಕ್ತ ಪಡಿಸಿದ್ದೇವೆ ಎಂದು ಹೇಳಿದರು.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ