AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು ಎಂಆರ್‌ಪಿಎಲ್‌ನಲ್ಲಿ ಭಾರಿ ಬಾಯ್ಲರ್ ಸ್ಫೋಟ: 4 ಮಂದಿ ರಕ್ಷಣೆ, 150 ಆಂಬುಲೆನ್ಸ್ ಸಿದ್ಧ; ಪ್ರತ್ಯಕ್ಷದರ್ಶಿ

ಮಂಗಳೂರು ಎಂಆರ್‌ಪಿಎಲ್‌ನಲ್ಲಿ ಭಾರಿ ಬಾಯ್ಲರ್ ಸ್ಫೋಟ: 4 ಮಂದಿ ರಕ್ಷಣೆ, 150 ಆಂಬುಲೆನ್ಸ್ ಸಿದ್ಧ; ಪ್ರತ್ಯಕ್ಷದರ್ಶಿ

ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on:Sep 30, 2026 | 3:49 PM

Share

ಮಂಗಳೂರಿನ ಜೋಕಟ್ಟೆ ಬಳಿಯ ಎಂಆರ್​ಪಿಎಲ್‌ನಲ್ಲಿ ಬಾಯ್ಲರ್ ಸ್ಫೋಟಗೊಂಡ ನಂತರ ತಕ್ಷಣದ ರಕ್ಷಣಾ ಹಾಗೂ ಅಗ್ನಿಶಮನ ಕಾರ್ಯಾಚರಣೆಗಳು ಆರಂಭಗೊಂಡಿವೆ. ಸ್ಥಳದಲ್ಲಿ ಆಂಬುಲೆನ್ಸ್‌ಗಳು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ನಾಲ್ವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಬೆಂಕಿ ನಂದಿಸುವ ಕಾರ್ಯ ಮುಂದುವರಿದಿದೆ. ಸದ್ಯಕ್ಕೆ ಹೆಚ್ಚಿನ ಅಪಾಯವಿಲ್ಲ ಎಂದು ಪ್ರತ್ಯಕ್ಷದರ್ಶಿ ನವಾಜ್ ತಿಳಿಸಿದ್ದಾರೆ.

ಮಂಗಳೂರು, ಸೆ.30: ಜಿಲ್ಲೆಯ ಜೋಕಟ್ಟೆ ಬಳಿಯ ಎಂಆರ್​ಪಿಎಲ್‌ನಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು, ಸ್ಥಳದಲ್ಲಿ ಅಗ್ನಿಶಮನ ದಳ ಮತ್ತು ರಕ್ಷಣಾ ಕಾರ್ಯಗಳು ಭರದಿಂದ ಸಾಗುತ್ತಿವೆ. ಘಟನೆ ನಡೆದ ಸ್ಥಳದಲ್ಲಿ ಹಾಜರಿದ್ದ ನವಾಜ್ ಎಂಬ ಪ್ರತ್ಯಕ್ಷದರ್ಶಿಯ ಪ್ರಕಾರ, ಯಾವುದೇ ದೊಡ್ಡ ಪ್ರಮಾಣದ ಹಾನಿ ಸಂಭವಿಸಿಲ್ಲ. ಅಗ್ನಿಶಾಮಕ ದಳದವರು ನೀರು ಹೊಡೆಯುತ್ತಿದ್ದು, ಬೆಂಕಿ ನಂದಿಸುವ ಕಾರ್ಯ ಪ್ರಗತಿಯಲ್ಲಿದೆ. ಸ್ಫೋಟದ ತಕ್ಷಣವೇ ಸುಮಾರು 150 ಆಂಬುಲೆನ್ಸ್‌ಗಳು ಸಿದ್ಧವಾಗಿ ನಿಂತಿದ್ದವು. ಪ್ರಾಥಮಿಕ ಮಾಹಿತಿಯಂತೆ, ನಾಲ್ಕು ಜನರನ್ನು ಎಂಆರ್​ಪಿಎಲ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ನವಾಜ್ ತಿಳಿಸಿದ್ದಾರೆ. ಬೆಂಕಿಯ ಮೂಲವು ಬಾಯ್ಲರ್ ಆಗಿದ್ದು, ನೀರು ಹಾರಿಸಿದಾಗಲೂ ಸಣ್ಣ ಪ್ರಮಾಣದ ಬೆಂಕಿ ಕಾಣಿಸಿಕೊಳ್ಳುತ್ತಿದೆ ಎಂದು ಅವರು ಹೇಳಿದರು. ಘಟನೆ ನಡೆದಾಗ ತಾವು ಸ್ಥಳದಲ್ಲಿದ್ದು, ನಂತರ ಆಂಬುಲೆನ್ಸ್‌ಗಳೊಂದಿಗೆ ತೆರಳಿದಾಗಿ ತಿಳಿಸಿದರು. ಸದ್ಯಕ್ಕೆ ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ಸಂಪೂರ್ಣವಾಗಿ ನಂದಿಸಲು ಶ್ರಮಿಸುತ್ತಿದ್ದಾರೆ. ಆರಂಭದಲ್ಲಿ ಒಂಬತ್ತು ಜನರು ಒಳಗಿದ್ದರು ಎಂದು ಹೇಳಲಾಗಿತ್ತು.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Sep 30, 2026 03:48 PM

Follow Us
ಪೃಥ್ವಿರಾಜ್​ ಬಿ.ಯು. ಮಂಗಳೂರು
ಪೃಥ್ವಿರಾಜ್​ ಬಿ.ಯು. ಮಂಗಳೂರು

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More