Loading video

ರಿಷಭ್ ಪಂತ್ ಸಹೋದರಿ ಮದುವೆಯಲ್ಲಿ ಧೋನಿ, ರೈನಾ ಮಸ್ತ್ ಡ್ಯಾನ್ಸ್

|

Updated on: Mar 12, 2025 | 9:56 AM

ಭಾರತ ತಂಡದ ಸ್ಟಾರ್ ಆಟಗಾರ ರಿಷಭ್ ಪಂತ್ ಅವರ ಸಹೋದರಿ ವೈವಾಹಿಕ ಜೀವನಕ್ಕೆ ಕಾಲಿಡುತ್ತಿದ್ದಾರೆ. ಲಂಡನ್ ಮೂಲದ ಉದ್ಯಮಿ ಅಂಕಿತ್ ಚೌಧರಿಯನ್ನು ಸಾಕ್ಷಿ ಪಂತ್ ವರಿಸಲಿದ್ದು, ಇದೀಗ ಡೆಹ್ರಾಡೂನ್​ನಲ್ಲಿ ವಿವಾಹ ಪೂರ್ವ ಕಾರ್ಯಕ್ರಮಗಳು ನಡೆಯುತ್ತಿದೆ. ಈ ಮದುವೆ ಸಮಾರಂಭದಲ್ಲಿ ಟೀಮ್ ಇಂಡಿಯಾದ ಮಾಜಿ ಆಟಗಾರರಾದ ಸುರೇಶ್ ರೈನಾ ಹಾಗೂ ಮಹೇಂದ್ರ ಸಿಂಗ್ ಧೋನಿ ಕಾಣಿಸಿಕೊಂಡಿದ್ದಾರೆ.

ಟೀಮ್ ಇಂಡಿಯಾದ ಸ್ಟಾರ್ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ಅವರ ಸಹೋದರಿ ಸಾಕ್ಷಿ ಪಂತ್ ಉದ್ಯಮಿ ಅಂಕಿತ್ ಚೌಧರಿ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಈ ವಿವಾಹ ಸಮಾರಂಭದಲ್ಲಿ ಟೀಮ್ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ, ಸುರೇಶ್ ರೈನಾ ಸೇರಿದಂತೆ ಹಲವು ಪ್ರಮುಖರು ಕಾಣಿಸಿಕೊಂಡಿದ್ದರು.

ಡೆಹ್ರಾಡೂನ್​ನಲ್ಲಿ ನಡೆಯುತ್ತಿರುವ ಈ ಕಾರ್ಯಕ್ರಮದಲ್ಲಿ ಮಹೇಂದ್ರ ಸಿಂಗ್ ಧೋನಿ, ಸುರೇಶ್ ರೈನಾ ಜೊತೆ ರಿಷಭ್ ಪಂತ್ ಜೊತೆಗೂಡಿ ಡ್ಯಾನ್ಸ್ ಮಾಡುತ್ತಿರುವ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.

ಇನ್ನು ಈ ವಿವಾಹ ಕಾರ್ಯಕ್ರಮದಲ್ಲಿ ಟೀಮ್ ಇಂಡಿಯಾದ ಎಲ್ಲಾ ಆಟಗಾರರು ಕಾಣಿಸಿಕೊಳ್ಳುವ ಸಾಧ್ಯತೆಯಿದೆ. ಅದರಲ್ಲೂ ರಿಷಭ್ ಪಂತ್ ಮುಂದಾಳತ್ವದ ಲಕ್ನೋ ಸೂಪರ್ ಜೈಂಟ್ಸ್ ತಂಡದ ಆಟಗಾರರು ಆರಕ್ಷತೆ ಕಾರ್ಯಕ್ರಮದ ವೇಳೆ ಹಾಜರಿರಲಿದ್ದಾರೆ ಎಂದು ವರದಿಯಾಗಿದೆ.