Republic Day: ತನ್ನ ಫಾರ್ಮ್‌ಹೌಸ್‌ನಲ್ಲಿ ಧ್ವಜಾರೋಹಣ ಮಾಡಿದ ಎಂಎಸ್ ಧೋನಿ: ವಿಡಿಯೋ ನೋಡಿ
MS Dhoni: ಟೀಮ್ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಕೂಡ 75ನೇ ಗಣರಾಜ್ಯೋತ್ಸವವನ್ನು ಆಚರಿಸಿದ್ದು, ಇದರ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿವೆ. ಈ ವಿಡಿಯೋವನ್ನು ಅವರ ಪತ್ನಿ ಸಾಕ್ಷಿ ಧೋನಿ ಹಂಚಿಕೊಂಡಿದ್ದಾರೆ.
ಶುಕ್ರವಾರ ದೇಶಾದ್ಯಂತ 75ನೇ ಗಣರಾಜ್ಯೋತ್ಸವವನ್ನು (Republic Day) ಆಚರಿಸಲಾಯಿತು. ದೇಶದ ಸಾಮಾನ್ಯ ನಾಗರಿಕರಿಂದ ಹಿಡಿದು ಕ್ರೀಡಾ ಪಟುಗಳ ವರೆಗೆ ಗಣರಾಜ್ಯೋತ್ಸವವನ್ನು ಆಚರಿಸಿದರು. ಅವರವರ ಮನೆಯಲ್ಲಿ ಧ್ವಜಾರೋಹಣ ಕೂಡ ಮಾಡಿದರು. ಟೀಮ್ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಕೂಡ 75ನೇ ಗಣರಾಜ್ಯೋತ್ಸವವನ್ನು ಆಚರಿಸಿದ್ದು, ಇದರ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿವೆ. ಈ ವಿಡಿಯೋವನ್ನು ಅವರ ಪತ್ನಿ ಸಾಕ್ಷಿ ಧೋನಿ ಹಂಚಿಕೊಂಡಿದ್ದಾರೆ. ಮಾಹಿ ಪ್ರಸ್ತುತ ರಾಂಚಿಯಲ್ಲಿರುವ ತನ್ನ ಐಷಾರಾಮಿ ಫಾರ್ಮ್ ಹೌಸ್‌ನಲ್ಲಿ ವಾಸಿಸುತ್ತಿದ್ದಾರೆ. ಧೋನಿ ಪತ್ನಿ ಇನ್ಸ್ಟಾಗ್ರಾಮ್ ನಲ್ಲಿ ಶೇರ್ ಮಾಡಿರುವ ವಿಡಿಯೋದಲ್ಲಿ ಧೋನಿ ಫಾರ್ಮ್ ಹೌಸ್ ಕೈಲಾಶಪತಿಯಲ್ಲಿ ಭಾರತದ ಧ್ವಜ ಹಾರಿಸಲಾಗಿದೆ. ಧೋನಿ ಅವರ ವೈರಲ್ ವೀಡಿಯೊದಲ್ಲಿ, ಅವರು ಕಪ್ಪು ಜಾಕೆಟ್ ಧರಿಸಿದ್ದಾರೆ. ಉದ್ದನೆಯ ಕೂದಲು ಬಿಟ್ಟಿರುವುದು ಕಾಣಬಹುದು.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Latest Videos