ಡಿಕೆ ಶಿವಕುಮಾರ್ ಇಂದ 500 ಕೋಟಿ ಅನುದಾನದ ಆಫರ್ ನೀಡಿದ್ದ ಬಂದಿತ್ತು, ತಿರಸ್ಕಾರ ಮಾಡಿದ್ದೇನೆ ಎಂದ ಎಂ.ಟಿ ಕೃಷ್ಣಪ್ಪ!
ಜೆಡಿಎಸ್ ಶಾಸಕ ಎಂ.ಟಿ. ಕೃಷ್ಣಪ್ಪ ಅವರಿಗೆ ಕಾಂಗ್ರೆಸ್ ಸೇರುವಂತೆ ಡಿಸಿಎಂ ಡಿಕೆ ಶಿವಕುಮಾರ್ 500 ಕೋಟಿ ರೂಪಾಯಿ ಆಫರ್ ನೀಡಿದ್ದರು ಎಂಬ ಹೇಳಿಕೆ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಈ ಆಫರ್ ತಿರಸ್ಕರಿಸಿರುವುದಾಗಿ ಕೃಷ್ಣಪ್ಪ ತಿಳಿಸಿದ್ದಾರೆ. ತುಮಕೂರಿನ ಸಿಎಸ್ ಪುರದಲ್ಲಿ ನಡೆದ ದೇವೇಗೌಡರ ಪುತ್ಥಳಿ ಅನಾವರಣ ಕಾರ್ಯಕ್ರಮದಲ್ಲಿ ಕುಮಾರಸ್ವಾಮಿ ಸಮ್ಮುಖದಲ್ಲೇ ಈ ವಿಚಾರ ಬಹಿರಂಗಪಡಿಸಿದ್ದು, ರಾಜ್ಯದಲ್ಲಿ ಮುಂದಿನ ಬಾರಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ತುಮಕೂರು, ನವೆಂಬರ್ 14: ಡಿಕೆ ಶಿವಕುಮಾರ್ ನೀಡಿದ್ದ 500 ಕೋಟಿ ರೂ. ಆಫರ್ ತಿರಸ್ಕರಿಸಿದ್ದೇನೆ ಎಂದು ಜೆಡಿಎಸ್ ಶಾಸಕ ಎಂ.ಟಿ. ಕೃಷ್ಣಪ್ಪ ಹೇಳಿಕೊಂಡಿದ್ದಾರೆ. ತುರುವೇಕೆರೆ ವಿಧಾನಸಭಾ ಕ್ಷೇತ್ರದ ಸಿಎಸ್ ಪುರದಲ್ಲಿ ನಡೆದ ಮಾಜಿ ಪ್ರಧಾನಿ ದೇವೇಗೌಡರ ಪುತ್ಥಳಿ ಅನಾವರಣ ಕಾರ್ಯಕ್ರಮದಲ್ಲಿ, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಸಮ್ಮುಖದಲ್ಲೇ ಈ ವಿಚಾರ ಬಹಿರಂಗಪಡಿಸಿದ್ದಾರೆ.
ತಮ್ಮನ್ನು ಮತ್ತು ಜಿ.ಟಿ. ದೇವೇಗೌಡರನ್ನು ಕಾಂಗ್ರೆಸ್‌ಗೆ ಆಹ್ವಾನಿಸಿದ್ದ ಡಿಕೆ ಶಿವಕುಮಾರ್, ಮುಖ್ಯಮಂತ್ರಿ ಮಾತು ಕೇಳಬೇಕು ಎಂದು ಹೇಳಿದ್ದರು. ಆದರೆ, ಕಾಂಗ್ರೆಸ್ ಸೇರುವುದಿಲ್ಲ, ರಾಜಕೀಯ ಬಿಡುತ್ತೇನೆ ಎಂದು ಉತ್ತರಿಸಿದ್ದಾಗಿ ಕೃಷ್ಣಪ್ಪ ತಿಳಿಸಿದ್ದಾರೆ. ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರಲಿದ್ದು, 160ರಿಂದ 185 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆಯಿದೆ ಎಂದೂ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

