ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್

Updated on: Dec 18, 2025 | 1:15 PM

ಮುಡಾ ಹಗರಣದಲ್ಲಿ ಸಿದ್ದರಾಮಯ್ಯನವರ ಪತ್ನಿ ಪಾರ್ವತಿ ಅವರ ಬಗ್ಗೆ ಲೋಕಾಯುಕ್ತ ನೀಡಿದ್ದ ಬಿ-ರಿಪೋರ್ಟ್​ನ ಸ್ನೇಹಮಯಿ ಕೃಷ್ಣ ಪ್ರಶ್ನಿಸಿದ್ದಾರೆ. ತನಿಖೆಯಲ್ಲಿ ಲೋಪದೋಷಗಳಾಗಿವೆ ಹಾಗೂ ಸಿದ್ದರಾಮಯ್ಯನವರ ಪ್ರಭಾವದಿಂದ ಲೋಕಾಯುಕ್ತ ಅಧಿಕಾರಿಗಳು ಸುಳ್ಳು ವರದಿ ಸಲ್ಲಿಸಿದ್ದಾರೆ ಎಂದು ಕೃಷ್ಣ ಆರೋಪಿಸಿದ್ದಾರೆ. ನ್ಯಾಯಾಲಯದಿಂದ ಸೂಕ್ತ ಆದೇಶ ನಿರೀಕ್ಷಿಸುತ್ತಿರುವುದಾಗಿ ಅವರು ತಿಳಿಸಿದ್ದಾರೆ.

ಬೆಂಗಳೂರು, ಡಿಸೆಂಬರ್​​ 18: ಸಿಎಂ ಸಿದ್ದರಾಮಯ್ಯ ಪತ್ನಿಗೆ ಮುಡಾ ಸೈಟ್ ಹಂಚಿಕೆ ಪ್ರಕರಣ ಸಂಬಂಧ ಸರಿಯಾಗಿ ತನಿಖೆ ಮಾಡದೆ ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಸಿದೆ‌ ಎಂದು ದೂರುದಾರ ಸ್ನೇಹಮಯಿ ಕೃಷ್ಣ ಆರೋಪಿಸಿದ್ದಾರೆ. ದಾಖಲೆ ಇದ್ದರೂ ಸರಿಯಾಗಿ ಪರಿಶೀಲನೆ ಮಾಡಿಲ್ಲ. ಉದ್ದೇಶ ಪೂರ್ವಕವಾಗಿ ಮಧ್ಯಂತರ ವರದಿ ಸಲ್ಲಿಸಲು ಮುಂದಾಗಿದ್ದು, ದಿನಾಂಕ ಮುಂದೂಡುವ ತಂತ್ರವನ್ನು ಅಧಿಕಾರಿಗಳು ಮಾಡುತ್ತಿದ್ದಾರೆ. ಆದರೆ ನನಗೆ ನ್ಯಾಯಾಲಯದ ಆದೇಶದ ಮೇಲೆ ಆತ್ಮವಿಶ್ವಾಸ ಇದ್ದು, ಬಿರಿಪೋರ್ಟ್​​ನ ಕೋರ್ಟ್ ತಿರಸ್ಕಾರ ಮಾಡುವ ಭರವಸೆ ಇದೆ ಎಂದಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.