ಬಿಜೆಪಿ-ಜೆಡಿಎಸ್ ಮೈಸೂರು ಚಲೋ ಪಾದಯಾತ್ರೆಗೆ ಇಂದು ತೆರೆ, ಲೈವ್ ಇಲ್ಲಿದೆ
MUDA Scam, Bangalore Mysore Padayatra Live: ಮುಡಾ ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಿನಾಮೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ನಾಯಕರು ಮೈಸೂರು ಚಲೋ ಪಾದಯಾತ್ರೆ ನಡೆಸಿದರು. ಬಿಜೆಪಿ-ಜೆಡಿಎಸ್ ನಾಯಕರ ಪಾದಯಾತ್ರೆಗೆ ತೆರೆ ಬೀಳಲಿದೆ. ಸಿದ್ದರಾಮಯ್ಯ ಅವರ ತವರು ಜಿಲ್ಲೆ ಮೈಸೂರಿನಲ್ಲಿ ಬಹೃತ್ ಸಮಾವೇಶ ಮೂಲಕ ಮೈತ್ರಿ ನಾಯಕರು ಸರ್ಕಾರದ ವಿರುದ್ಧ ರಣಕಹಳೆ ಮೊಳಗಿಸಲಿದ್ದಾರೆ.
ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಮುಡಾ) ನಿವೇಶನ ಹಂಚಿಕೆಯಲ್ಲಿ ಹಗರಣ ಮತ್ತು ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ಹಗರಣದಲ್ಲೂ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗಿಯಾಗಿದ್ದಾರೆ ಎಂದು ವಿಪಕ್ಷಗಳು ಆರೋಪ ಮಾಡುತ್ತಿವೆ. ಹೀಗಾಗಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಬೇಕೆಂದು ಆಗ್ರಹಿಸಿ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಬೆಂಗಳೂರಿನಿಂದ ಮೈಸೂರು ಚಲೋ ಪಾದಯಾತ್ರೆ ನಡೆಸಿದರು. ಪಾದಯಾತ್ರೆ ಉದ್ದಕ್ಕೂ ಬಿಜೆಪಿ-ಜೆಡಿಎಸ್ ನಾಯಕರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ಮಾಡುತ್ತಾ ಬಂದಿದ್ದಾರೆ. ಈಗಾಗಲೆ ಪಾದಯಾತ್ರೆ ಮೈಸೂರು ತಲುಪಿದೆ. ಈ ಪಾದಯಾತ್ರೆ ಶನಿವಾರ ಅಂತ್ಯವಾಗಲಿದೆ. ಮೈಸೂರಿನ ಮಹಾರಾಜ ಮೈದಾನದಲ್ಲಿ ಬೃಹತ್ ಸಮಾವೇಶ ನಡೆಯಲಿದೆ. ಸಮಾವೇಶದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಹೆಚ್ಡಿ ಕುಮಾರಸ್ವಾಮಿ ಸೇರಿದಂತೆ ಹಲವು ನಾಯಕರು ಭಾಗಿಯಾಗಲಿದ್ದಾರೆ.
Published on: Aug 10, 2024 12:09 PM