ರಾಜ್ಯಪಾಲರು ದೆಹಲಿಯಿಂದ ಬರುತ್ತಿದ್ದಂತೆಯೇ ರಾಜಭವಕ್ಕೆ ದೌಡಾಯಿಸಿದ ಟಿಜೆ ಅಬ್ರಹಾಂ
ಸಾಮಾಜಿ ಕಾರ್ಯಕರ್ತ ಟಿಜೆ ಅಬ್ರಾಹಂ ಅವರು ದೂರು ನೀಡಿದ ಬೆನ್ನಲ್ಲೇ ಮುಡಾ ಹಗರಣ ಸಂಬಂಧ ರಾಜ್ಯಪಾಲ ಥಾವರ್ ಚೆಂದ್ ಗೆಹ್ಲೋಟ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶೋಕಾಸ್ ಜಾರಿ ಮಾಡಿದ್ದಾರೆ. ಇದೀಗ ರಾಜ್ಯಪಾಲರು ದೆಹಲಿ ಪ್ರವಾಸ ಮುಗಿಸಿ ವಾಪಸ್ ಬೆಂಗಳೂರಿಗೆ ಬರುತ್ತಿದ್ದಂತೆಯೇ ಟಿಜೆ ಅಬ್ರಾಹಂ ಭೇಟಿ ಮಾಡಿದ್ದು ಸಂಚಲನ ಮೂಡಿಸಿದೆ.
ಬೆಂಗಳೂರು, (ಆಗಸ್ಟ್ 06): ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಮುಡಾ) ನಿವೇಶ ಹಂಚಿಕೆ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗಿಯಾಗಿದ್ದಾರೆ ಎಂದು ಟಿಜೆ ಅಬ್ರಾಹಂ ಎಂಬುವರು ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ಇದೇ ದೂರು ಇದೀಗ ಸಿಎಂ ಸಿದ್ದರಾಮಯ್ಯ ಕಂಟಕ ತಂದಿಟ್ಟಿದೆ. ಟಿಜೆ ಅಬ್ರಾಹಂ ನೀಡಿದ ದೂರಿನ ಮೇರೆಗೆ ರಾಜ್ಯಪಾಲ ಥಾವರ್ ಚೆಂದ್ ಗೆಹ್ಲೋಟ್ ಅವರು ನಿಮ್ಮ ವಿರುದ್ಧ ಏಕೆ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಬಾರದು ಎಂದು ಸಿದ್ದರಾಮಯ್ಯಗೆ ಶೋಕಾಸ್ ನೋಟಿಸ್ ನೀಡಿದ್ದಾರೆ. ಇದರ ಬೆನ್ನಲ್ಲೇ ರಾಜ್ಯ ರಾಜಕಾರಣದಲ್ಲಿ ಹಲ್ಚಲ್ ಎದ್ದಿದೆ. ಇನ್ನು ರಾಜ್ಯಪಾಲರು ದೆಹಲಿ ಪ್ರವಾಸದಿಂದ ಬೆಂಗಳೂರಿಗೆ ವಾಪಸ್ ಆಗಿದ್ದು. ಇದರ ಬೆನ್ನಲ್ಲೇ ಸಾಮಾಜಿ ಕಾರ್ಯಕರ್ತ ಟಿಜೆ ಅಬ್ರಾಹಂ ಅವರು ಇಂದು(ಆಗಸ್ಟ್ 06) ರಾಜ್ಯಪಾಲರನ್ನು ಭೇಟಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಮತ್ತೆ ಸಂಚಲನಕ್ಕೆ ಕಾರಣವಾಗಿದೆ.
ಇನ್ನು ಸಿಎಂಗೆ ನೀಡಿರುವ ಶೋಕಾಸ್ ನೋಟಿಸ್ ವಾಪಸ್ ಪಡೆಯಬೇಕೆಂದು ಸಚಿವ ಸಂಪುಟ ನಿರ್ಣಯ ಅಂಗೀಕರಿಸಿದೆ. ಆದ್ರೆ, ಇದೀಗ ರಾಜ್ಯಪಾಲರು ನಿರ್ಣಯ ಅಂಗೀಕಾರ ಧಿಕ್ಕರಿಸಿ ಸಿಎಂ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡುತ್ತಾರಾ? ಅಥವಾ ನೋಟಿಸ್ ವಾಪಸ್ ಪಡೆಯುತ್ತಾರಾ| ಹೀಗೆ ಯಾವ ತೀರ್ಮಾನ ಕೈಗೊಳ್ಳುತ್ತಾರೆ ಎನ್ನುವುದು ಕುತೂಹಲ ಮೂಡಿಸಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ