ಸಿದ್ದರಾಮಯ್ಯರನ್ನು ಆರೋಪಿ ಸ್ಥಾನದಲ್ಲಿ ನಿಲ್ಲಿಸಲು ಇಡಿ ಯತ್ನ: ಯತೀಂದ್ರ ಆರೋಪ

ಸಿದ್ದರಾಮಯ್ಯರನ್ನು ಆರೋಪಿ ಸ್ಥಾನದಲ್ಲಿ ನಿಲ್ಲಿಸಲು ಇಡಿ ಯತ್ನ: ಯತೀಂದ್ರ ಆರೋಪ

ದಿಲೀಪ್​, ಚೌಡಹಳ್ಳಿ
| Updated By: Ganapathi Sharma

Updated on:Jan 31, 2025 | 9:45 AM

ಮುಡಾ ಹಗರಣ ಸಂಬಂಧ ಜಾರಿ ನಿರ್ದೇಶನಾಲಯದ ತತ್ಕಾಲಿಕ ಜಪ್ತಿ ಆದೇಶದಲ್ಲಿ ಸಿಎಂ ಸಿದ್ದರಾಮಯ್ಯ ಹೆಸರು ಉಲ್ಲೇಖವಾಗಿದೆ ಎಂಬ ವರದಿಗಳ ಬಗ್ಗೆ ಸಿದ್ದರಾಮಯ್ಯ ಪುತ್ರ ಯತೀಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಇಡಿ ಸಿದ್ದರಾಮಯ್ಯ ವಿರುದ್ಧ ಸಂಚು ರೂಪಿಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ಅವರು ಹೇಳಿದ್ದೇನೆಂಬುದು ಈ ವಿಡಿಯೋದಲ್ಲಿದೆ.

ಮುಡಾ ಹಗರಣ ಸಂಬಂಧ ಜಾರಿ ನಿರ್ದೇಶನಾಲಯ (ಇಡಿ) ಈಗಾಗಲೇ ಅನೇಕ ಸೈಟ್​ಗಳನ್ನು ಜಪ್ತಿ ಮಾಡಿದೆ. ಇದೀಗ, ಇಡಿ ತಾತ್ಕಾಲಿಕ ಜಪ್ತಿ ಆದೇಶದಲ್ಲಿ ಸಿಎಂ ಸಿದ್ದರಾಮಯ್ಯ ಹೆಸರು ಉಲ್ಲೇಖವಾಗಿದೆ ಎಂಬ ವಿಚಾರ ಚರ್ಚೆಗೆ ಗ್ರಾಸವಾಗಿದೆ. ಈ ಬಗ್ಗೆ ಸಿದ್ದರಾಮಯ್ಯ ಪುತ್ರ ಯತೀಂದ್ರ ಪ್ರತಿಕ್ರಿಯಿಸಿ, ಸಿದ್ದರಾಮಯ್ಯರನ್ನು ಆರೋಪಿ ಸ್ಥಾನದಲ್ಲಿ ನಿಲ್ಲಿಸಲು ಇಡಿ ಈ ರೀತಿ ಮಾಡುತ್ತಿದೆ ಎಂದಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಅವರು, ಮುಡಾ ನಮ್ಮ ಜಮೀನನ್ನು ಅನಧಿಕೃತವಾಗಿ ವಶಪಡಿಸಿಕೊಂಡಿತ್ತು. ಅದಕ್ಕೆ ಬದಲಿಯಾಗಿ ನಮಗೆ ನಿವೇಶನ ಕೊಟ್ಟಿದ್ದರು. ಭೂಸ್ವಾಧಿನಪಡಿಸಿಕೊಂಡ ಭೂಮಿಯನ್ನು ರೈತರಿಗೆ ನಿವೇಶನ ಕೊಟ್ಟಿದ್ದಾರೆ. ಮುಡಾ ಸದಸ್ಯರು ಇದರಲ್ಲಿ ಭಾಗಿಯಾಗಿದ್ದಾರೆ. ಇದಕ್ಕೂ ನಮ್ಮ 14 ನಿವೇಶನಗಳಿಗೂ ಯಾವುದೇ ಸಂಬಂಧ ಇಲ್ಲ ಎಂದಿದ್ದಾರೆ.

ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣ: ಇಡಿ ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗ

Published on: Jan 31, 2025 09:45 AM