Loading video

ಮುಡಾ ಕೇಸ್​ಗೆ ಟ್ವಿಸ್ಟ್: ಸ್ನೇಹಮಯಿ ಕೃಷ್ಣರಿಂದ ಮತ್ತೊಂದು ಗಂಭೀರ ಆರೋಪ

| Updated By: Ganapathi Sharma

Updated on: Mar 12, 2025 | 10:16 AM

ಮುಡಾ ಹಗರಣ ಸಂಬಂಧ ದೂರುದಾರ ಸ್ನೇಹಮಯಿ ಕೃಷ್ಣ ಇದೀಗ ಮತ್ತೊಂದು ಗಂಭೀರ ಆರೋಪ ಮಾಡಿದ್ದಾರೆ. ಪ್ರಕರಣ ಸಂಬಂಧ ಲೋಕಾಯುಕ್ತ ತನಿಖೆಯಲ್ಲಿ ವಾಸ್ತವ ಮರೆಮಾಚಲಾಗಿದೆ. ನಕಲಿ ಸಹಿ ಮಾಡಿ ವಂಚನೆ ಎಸಗಿದ್ದನ್ನು ನಮೂದಿಸಲಾಗಿಲ್ಲ. ಇದೇ ಅಂಶ ಮುಂದಿಟ್ಟುಕೊಂಡು ಸಿಬಿಐ ತನಿಖೆಗೆ ಮನವಿ ಮಾಡುತ್ತೇನೆ ಎಂದು ಅವರು ಹೇಳಿದ್ದಾರೆ.

ಮೈಸೂರು, ಮಾರ್ಚ್ 12: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧದ ಲೋಕಾಯುಕ್ತ ತನಿಖಾ ವರದಿ ವಿಚಾರವಾಗಿ ದೂರುದಾರ ಸ್ನೇಹಮಯಿ‌ಕೃಷ್ಣ ಗಂಭೀರ ಆರೋಪ ಮಾಡಿದ್ದಾರೆ. ಆರೋಪಿ ಮಲ್ಲಿಕಾರ್ಜುನ ಸ್ವಾಮಿ 1998ರಲ್ಲಿ ದೇವರಾಜ್ ಸಹಿ ನಕಲು ಮಾಡಿದ್ದರು ಎಂದು ದಾಖಲೆ ಸಮೇತ ತೋರಿಸಿರುವ ಅವರು, ಈ ವಿಚಾರವನ್ನು ಲೋಕಾಯುಕ್ತ ವರದಿಯಲ್ಲಿ ಮುಚ್ಚಿಡಲಾಗಿದೆ. ಇದನ್ನೇ ಮುಂದಿಟ್ಟುಕೊಂಡು ಸಿಬಿಐ ತನಿಖೆಗೆ ಆದೇಶಿಸುವಂತೆ ನ್ಯಾಯಾಲಯದಲ್ಲಿ ಮನವಿ ಮಾಡುವುದಾಗಿ ತಿಳಿಸಿದ್ದಾರೆ. ವಿವರಗಳಿಗೆ ವಿಡಿಯೋ ನೋಡಿ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Mar 12, 2025 10:14 AM