AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುತೂಹಲಕ್ಕೆ ಕಾರಣವಾದ ಡಿಸಿಎಂ ಡಿಕೆ ಶಿವಕುಮಾರ್​ ತುರ್ತು ಸುದ್ದಿಗೋಷ್ಠಿ, ಇಲ್ಲಿದೆ ಲೈವ್​

ಕುತೂಹಲಕ್ಕೆ ಕಾರಣವಾದ ಡಿಸಿಎಂ ಡಿಕೆ ಶಿವಕುಮಾರ್​ ತುರ್ತು ಸುದ್ದಿಗೋಷ್ಠಿ, ಇಲ್ಲಿದೆ ಲೈವ್​

ಗಂಗಾಧರ​ ಬ. ಸಾಬೋಜಿ
|

Updated on: Aug 01, 2024 | 9:41 PM

Share

ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ದ ವಿಚಾರಣೆಗೆ ಅನುಮತಿ ನೀಡುವ ಕುರಿತು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್​ ಮತ್ತೆ ವರದಿ ಕೇಳಿದ್ದಾರೆ. ಇದರ ಬೆನ್ನಲ್ಲೇ ಇಂದು ಡಿಸಿಎಂ ಡಿಕೆ ಶಿವಕುಮಾರ್ ​ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ನೊಟೀಸ್ ವಾಪಸಿಗೆ ನಿರ್ಣಯ ಅಂಗೀಕರಿಸಿದೆ. ನೋಟಿಸ್​ ಹಿಂಪಡೆಯುವಂತೆ ರಾಜ್ಯಪಾಲರಿಗೆ ಸಲಹೆ ಕೂಡ ನೀಡಲಾಗಿದೆ. ಇದೀಗ ಡಿಕೆ ಶಿವಕುಮಾರ್ ಮತ್ತೆ ಸುದ್ದಿಗೋಷ್ಠಿ ನಡೆಸಿದ್ದಾರೆ.

ಬೆಂಗಳೂರು, ಆಗಸ್ಟ್​ 01: ಕರ್ನಾಟಕ ರಾಜ್ಯ ರಾಜಕೀಯದಲ್ಲಿ ಸದ್ಯ ಊಹಿಸಲಾಗದ ಬೆಳವಣಿಗೆಗಳು ಆಗುತ್ತಿವೆ. ಮುಡಾ ಹಗರಣವನ್ನ ಗಂಭೀರವಾಗಿ ಪರಿಗಣಿಸಿರುವ ರಾಜ್ಯಪಾಲರು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ (Siddaramaiah) ಶೋಕಾಸ್ ನೋಟಿಸ್ ನೀಡಿದ್ದಾರೆ. ರಾಜ್ಯಪಾಲರ ಶೋಕಾಸ್ ನೋಟಿಸ್ ಬೆನ್ನಲ್ಲೇ ಇಂದು(ಆಗಸ್ಟ್ 01) ಡಿಸಿಎಂ ಡಿಕೆ ಶಿವಕುಮಾರ್ (DK Shivakumar)​ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ನೊಟೀಸ್ ವಾಪಸಿಗೆ ನಿರ್ಣಯ ಅಂಗೀಕರಿಸಿದೆ. ಬಳಿಕ ಸುದ್ದಿಗೋಷ್ಠಿ ನಡೆಸಿ ಸಿಎಂಗೆ ನೀಡಿದ ಶೋಕಾಸ್​ ನೋಟಿಸ್​ ಹಿಂಪಡೆಯುವಂತೆ ರಾಜ್ಯಪಾಲರಿಗೆ ಸಲಹೆ ನೀಡಿದ್ದರು. ಸದ್ಯ ಇದೀಗ ಡಿಸಿಎಂ ಡಿಕೆ ಶಿವಕುಮಾರ್ ಮತ್ತೆ ತಮ್ಮ​ ಸದಾಶಿವನಗರ ನಿವಾಸದಲ್ಲಿ ತುರ್ತು ಸುದ್ದಿಗೋಷ್ಠಿ ನಡೆಸಿದ್ದು, ಅದರ ನೇರಪ್ರಸಾರ ಇಲ್ಲಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
ಗಂಗಾಧರ​ ಬ. ಸಾಬೋಜಿ
ಗಂಗಾಧರ​ ಬ. ಸಾಬೋಜಿ

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More