ಕುತೂಹಲಕ್ಕೆ ಕಾರಣವಾದ ಡಿಸಿಎಂ ಡಿಕೆ ಶಿವಕುಮಾರ್ ತುರ್ತು ಸುದ್ದಿಗೋಷ್ಠಿ, ಇಲ್ಲಿದೆ ಲೈವ್
ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ದ ವಿಚಾರಣೆಗೆ ಅನುಮತಿ ನೀಡುವ ಕುರಿತು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಮತ್ತೆ ವರದಿ ಕೇಳಿದ್ದಾರೆ. ಇದರ ಬೆನ್ನಲ್ಲೇ ಇಂದು ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ನೊಟೀಸ್ ವಾಪಸಿಗೆ ನಿರ್ಣಯ ಅಂಗೀಕರಿಸಿದೆ. ನೋಟಿಸ್ ಹಿಂಪಡೆಯುವಂತೆ ರಾಜ್ಯಪಾಲರಿಗೆ ಸಲಹೆ ಕೂಡ ನೀಡಲಾಗಿದೆ. ಇದೀಗ ಡಿಕೆ ಶಿವಕುಮಾರ್ ಮತ್ತೆ ಸುದ್ದಿಗೋಷ್ಠಿ ನಡೆಸಿದ್ದಾರೆ.
ಬೆಂಗಳೂರು, ಆಗಸ್ಟ್ 01: ಕರ್ನಾಟಕ ರಾಜ್ಯ ರಾಜಕೀಯದಲ್ಲಿ ಸದ್ಯ ಊಹಿಸಲಾಗದ ಬೆಳವಣಿಗೆಗಳು ಆಗುತ್ತಿವೆ. ಮುಡಾ ಹಗರಣವನ್ನ ಗಂಭೀರವಾಗಿ ಪರಿಗಣಿಸಿರುವ ರಾಜ್ಯಪಾಲರು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ (Siddaramaiah) ಶೋಕಾಸ್ ನೋಟಿಸ್ ನೀಡಿದ್ದಾರೆ. ರಾಜ್ಯಪಾಲರ ಶೋಕಾಸ್ ನೋಟಿಸ್ ಬೆನ್ನಲ್ಲೇ ಇಂದು(ಆಗಸ್ಟ್ 01) ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ನೊಟೀಸ್ ವಾಪಸಿಗೆ ನಿರ್ಣಯ ಅಂಗೀಕರಿಸಿದೆ. ಬಳಿಕ ಸುದ್ದಿಗೋಷ್ಠಿ ನಡೆಸಿ ಸಿಎಂಗೆ ನೀಡಿದ ಶೋಕಾಸ್ ನೋಟಿಸ್ ಹಿಂಪಡೆಯುವಂತೆ ರಾಜ್ಯಪಾಲರಿಗೆ ಸಲಹೆ ನೀಡಿದ್ದರು. ಸದ್ಯ ಇದೀಗ ಡಿಸಿಎಂ ಡಿಕೆ ಶಿವಕುಮಾರ್ ಮತ್ತೆ ತಮ್ಮ ಸದಾಶಿವನಗರ ನಿವಾಸದಲ್ಲಿ ತುರ್ತು ಸುದ್ದಿಗೋಷ್ಠಿ ನಡೆಸಿದ್ದು, ಅದರ ನೇರಪ್ರಸಾರ ಇಲ್ಲಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.