ಮುಡಾ 364 ಕೋಟಿ ರೂ. ದುರ್ಬಳಕೆ: ಇಡಿ ದೂರುದಾರರಿಂದ ಶಾಕಿಂಗ್ ಹೇಳಿಕೆ

| Updated By: Ganapathi Sharma

Updated on: Oct 01, 2024 | 9:34 AM

ಮುಡಾ ಹಗರಣ ಸಿಎಂ ಸಿದ್ದರಾಮಯ್ಯಗೆ ಬಹಳಷ್ಟು ಸಂಕಷ್ಟ ತಂದೊಡ್ಡಿದೆ. ಇದೀಗ ಜಾರಿ ನಿರ್ದೇಶನಾಲಯ ಕೂಡ ಪ್ರಕರಣ ದಾಖಲಿಸಿದೆ. ಮುಡಾದಲ್ಲಿ ನಡೆದಿದೆ ಎನ್ನಲಾದ ಅಕ್ರಮಕ್ಕೆ ಸಂಬಂಧಿಸಿ ದೂರುದಾರ ಪಿಎಸ್ ನಟರಾಜ್ ‘ಟಿವಿ9’ ಜತೆ ಮಾತನಾಡಿದ್ದಾರೆ. ಆ ವಿಡಿಯೋ ಇಲ್ಲಿದೆ.

ಮೈಸೂರು, ಅಕ್ಟೋಬರ್ 1: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿದೆ ಎನ್ನಲಾದ ಹಣಕಾಸು ಅವ್ಯವಹಾರ ವಿಚಾರ ಇದೀಗ ಸಿಎಂ ಸಿದ್ದರಾಮಯ್ಯಗೆ ಮತ್ತಷ್ಟು ಸಂಕಷ್ಟ ತಂದೊಡ್ಡಿದೆ. ಮುಡಾದಲ್ಲಿ 364 ಕೋಟಿ ರೂ. ದುರ್ಬಳಕೆಯಾಗಿದೆ ಎಂಬ ಆರೋಪ ಸಂಬಂಧ ಪಿಎಸ್​ ನಟರಾಜ್ ಅವರು ಜಾರಿ ನಿರ್ದೇಶನಾಲಯಕ್ಕೆ ದೂರು ನೀಡಿದ್ದರು. ಇದರ ಅನ್ವಯ ಇದೀಗ ಜಾರಿ ನಿರ್ದೇಶನಾಲಯ ಸಿದ್ದರಾಮಯ್ಯ ವಿರುದ್ಧ ಪ್ರಕರಣ ದಾಖಲಿಸಿದೆ.

ಇದೀಗ ಸಿದ್ದರಾಮಯ್ಯ ವಿರುದ್ಧದ ಆರೋಪಕ್ಕೆ ಸಂಬಂಧಪಟ್ಟ ಹಾಗೆ ಹಿಂದೆ ಮುಡಾದಲ್ಲಿ ಕೆಲಸವನ್ನೂ ನಿರ್ವಹಿಸಿದ್ದ ಆಗಿರುವ ಪಿಎಸ್​ ನಟರಾಜ್ ‘ಟಿವಿ9’ ಜತೆ ಮಾತನಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ