ಮುಡಾದಿಂದ 14 ಸೈಟ್ ಪಡೆಯೋದಕ್ಕೂ ಮುನ್ನವೇ ಹಲವು ಸೈಟ್ ಪಡೆದಿದ್ದ ಸಿದ್ದರಾಮಯ್ಯ: ಕುಮಾರಸ್ವಾಮಿ ಗಂಭೀರ ಆರೋಪ

Edited By:

Updated on: Oct 01, 2024 | 2:33 PM

ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ವಿರುದ್ಧದ ಆರೋಪಗಳು ಮತ್ತು ಮುಡಾ ಹಗರಣ ಸಂಬಂಧ ದೆಹಲಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ, ಸಿಎಂ ಸಿದ್ದರಾಮಯ್ಯ ಪತ್ನಿ ಪಡೆದಿದ್ದಾರೆ ಎನ್ನಲಾದ 14 ಸೈಟ್​ಗಿಂತ ಹಳೆಯ ದೊಡ್ಡ ಕೇಸ್ ಇದೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ. ದಾಖಲೆಯನ್ನೂ ಪ್ರದರ್ಶಿಸಿದ್ದಾರೆ. ಆ ವಿಡಿಯೋ ಇಲ್ಲಿದೆ ನೋಡಿ.

ನವದೆಹಲಿ, ಅಕ್ಟೋಬರ್ 1: ಕರ್ನಾಟಕ ಹೈಕೋರ್ಟ್ ಮತ್ತು ಜನಪ್ರತಿನಿಧಿಗಳ ಕೋರ್ಟ್​ ಮುಡಾ ಪ್ರಕರಣ ಸಂಬಂಧ ತನಿಖೆಗೆ ಆದೇಶ ನೀಡಿವೆ. ಮೊದಲಿಗೆ, ನಮ್ಮ ಸೈಟ್​​ಗಳನ್ನೇ ಮುಡಾ ಸ್ವಾಧೀನಕ್ಕೆ ತಗೊಂಡಿತ್ತು ಎಂದಿದ್ದರು. ನಂತರ 60 ಕೋಟಿ ರೂಪಾಯಿ ಹಣ ನೀಡಿದ್ರೆ ಸೈಟ್ ವಾಪಸ್ ನೀಡುತ್ತೇವೆ ಎಂದಿದ್ದರು ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು. ಜತೆಗೆ, ಮುಡಾದಿಂದ 14 ಸೈಟ್​​ಗಳನ್ನು ಪಡೆದ ವಿಚಾರ ಹಾಗಿರಲಿ, ಅದಕ್ಕಿಂತ ದೊಡ್ಡ ಪ್ರಕರಣ ಇಲ್ಲಿದೆ ನೋಡಿ ಎಂದು ದಾಖಲೆಗಳನ್ನು ಪ್ರದರ್ಶಿಸಿದರು.

ಮುಡಾ ಹಗರಣಕ್ಕೂ ಮೊದಲೇ ಸಿದ್ದರಾಮಯ್ಯನವರು ಸೈಟ್​ಗಳನ್ನು ಪಡೆದ ಬಗ್ಗೆ ಆರೋಪ ಮಾಡಿರುವ ಕುಮಾರಸ್ವಾಮಿ, ಆ ಬಗ್ಗೆ ದಾಖಲೆಗಳನ್ನು ಪ್ರದರ್ಶಿಸಿದ್ದಾರೆ. ವಿವರ ವಿಡಿಯೋದಲ್ಲಿದೆ ನೋಡಿ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published on: Oct 01, 2024 01:09 PM
Loading...
Unable to load recommendations.
Follow Us
ಹರೀಶ್ ಜಿ.ಆರ್​.

ಹರೀಶ್ ಜಿ.ಆರ್ ಮೂಲತಃ ಚಿಕ್ಕಮಗಳೂರಿನವರಾಗಿದ್ದು, ಪೌಢ ಶಿಕ್ಷಣವನ್ನು ಉಜಿರೆಯ ಎಸ್ ಡಿಎಂ ಸಂಸ್ಥೆಯಲ್ಲಿ ಹಾಗೂ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ದಲ್ಲಿ ಬಿ.ಎ ಪದವಿಯನ್ನು, ಮಾನಸ ಗಂಗೋತ್ರಿಯ EMMRC ಸಂಸ್ಥೆಯ ಎಲೆಕ್ಟ್ರಾನಿಕ್ ಮೀಡಿಯಾ ವಿಷಯದಲ್ಲಿ ಎಂಎಸ್ಸಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಸಧ್ಯ ಪತ್ರಿಕೋದ್ಯಮದಲ್ಲಿ 14 ವರ್ಷದ ಅನುಭವ ಹೊಂದಿರುವ ಇವರು, ದೆಹಲಿಯಲ್ಲಿಯೇ 10 ವರ್ಷಗಳ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದಾರೆ. ರಾಜ್ಯ, ರಾಜಕೀಯ, ರಾಷ್ಟ್ರೀಯ, ಅಂತರರಾಷ್ಟ್ರೀಯ, ಸುಪ್ರೀಂಕೋರ್ಟ್ ವರದಿಗಾರಿಕೆಯಲ್ಲಿ ಅಪಾರ ಅನುಭವ ಹೊಂದಿದ್ದಾರೆ. ಅಯೋಧ್ಯೆ ರಾಮಮಂದಿರದ ತೀರ್ಪು ನಿಂದ ಹಿಡಿದು ಮಂದಿರ ಉದ್ಘಾಟನೆವರೆಗೂ ವರದಿ ಮಾಡಿದ ಅನುಭವ ಹೊಂದಿದ್ದಾರೆ. ಪುಲ್ವಾಮ ಉಗ್ರರ ದಾಳಿ, ಪಹಲ್ಗಾಂ ಉಗ್ರರ ದಾಳಿ, ಆದಾದ ನಂತರದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಗಳನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಗ್ರೌಂಡ್ ರಿಪೋರ್ಟ್ ಮಾಡಿರುವ ಅನುಭವ ಹೊಂದಿದ್ದಾರೆ.. ಉತ್ತರಖಂಡದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪಗಳನ್ನು ಗ್ರೌಂಡ್ ರಿಪೋರ್ಟ್ ಮಾಡಿದ್ದಾರೆ. 2019‌ ಹಾಗೂ 2024ರ ಲೋಕಸಭಾ ಚುನಾವಣೆಯಲ್ಲಿ ವಿವಿಧ ರಾಜ್ಯಗಳನ್ನು ಸುತ್ತಿ ಜನರ ರಾಜಕೀಯ ನಾಡಿಮಿಡಿತದ ವರದಿ ಮಾಡಿದ್ದಾರೆ.. ಸಧ್ಯ ಇವರು ಬೆಂಗಳೂರಿನಲ್ಲಿ ರಾಜಕೀಯ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.

Read More