ಪ್ರಾಸಿಕ್ಯೂಷನ್ ತೀರ್ಪು: ಸಿದ್ದರಾಮಯ್ಯ ಮನೆ ಸೇರಿದಂತೆ ರಾಜ್ಯಾದ್ಯಂತ ಬಿಗಿ ಭದ್ರತೆ, ಲೈವ್​​ ಇಲ್ಲಿದೆ

Muda Scam High Court judgment Live: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳ ವಿರುದ್ಧ ನೀಡಿರುವ ಪ್ರಸಿಕ್ಯೂಷನ್​ಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್​ ಮಂಗಳವಾರ ತೀರ್ಪು ಪ್ರಕಟವಾಗಿದೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಮನೆ ಸುತ್ತ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಈ ಕುರಿತ ಡೀಟೆಲ್ಸ್​ ಇಲ್ಲಿದೆ.

ಪ್ರಾಸಿಕ್ಯೂಷನ್ ತೀರ್ಪು: ಸಿದ್ದರಾಮಯ್ಯ ಮನೆ ಸೇರಿದಂತೆ ರಾಜ್ಯಾದ್ಯಂತ ಬಿಗಿ ಭದ್ರತೆ, ಲೈವ್​​ ಇಲ್ಲಿದೆ
|

Updated on:Sep 24, 2024 | 12:10 PM

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದ ಬದಲಿ ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿಬಂದಿದೆ. ಈ ಅಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗಿಯಾಗಿದ್ದಾರೆ ಎಂದು ವಿಪಕ್ಷಗಳು ಆರೋಪ ಮಾಡಿವೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ನೀಡಿರುವ ಪ್ರಾಸಿಕ್ಯೂಷನ್​ ನೀಡಿದ್ದಾರೆ. ಇದನ್ನು ವಿರೋಧಿಸಿ ಸಿಎಂ ಸಿದ್ದರಾಮಯ್ಯ ಹೈಕೋರ್ಟ್​ ಮೆಟ್ಟಿಲೇರಿದ್ದು, ಇಂದು (ಸೆ.24) ತೀರ್ಪು ಪ್ರಕಟವಾಗಿದೆ.

Published On - 12:07 pm, Tue, 24 September 24

Follow us