ಸಿಎಂ ಸಿದ್ದರಾಮಯ್ಯರನ್ನ ವಿಚಾರಣೆಗೆ ಒಳಪಡಿಸಿ: ಲೋಕಾಯುಕ್ತಕ್ಕೆ ಸ್ನೇಹಮಯಿ ಕೃಷ್ಣ ಮನವಿ

ಸಿಎಂ ಸಿದ್ದರಾಮಯ್ಯರನ್ನ ವಿಚಾರಣೆಗೆ ಒಳಪಡಿಸಿ: ಲೋಕಾಯುಕ್ತಕ್ಕೆ ಸ್ನೇಹಮಯಿ ಕೃಷ್ಣ ಮನವಿ

ವಿವೇಕ ಬಿರಾದಾರ
|

Updated on: Oct 14, 2024 | 11:33 AM

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣದ ತನಿಖೆಯನ್ನು ಮೈಸೂರು ಲೋಕಾಯುಕ್ತ ನಡೆಸುತ್ತಿದೆ. ಮುಡಾ ಹಗರಣ ಪ್ರಕರಣದ ಎ1 ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ವಿಚಾರಣೆಗೆ ಒಳಪಡಿಸುವಂತೆ ದೂರುದಾರ ಸ್ನೇಹಮಯಿ ಕೃಷ್ಣ ಲೋಕಾಯುಕ್ತಾ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣದ ತನಿಖೆ ನಡೆಸುವಂತೆ ನ್ಯಾಯಾಲಯ ಮೈಸೂರು ಲೋಕಾಯುಕ್ತಕ್ಕೆ ಆದೇಶಿಸಿದೆ. ಮೈಸೂರು ಲೋಕಾಯುಕ್ತ ಈಗಾಗಲೆ ತನಿಖೆ ಆರಂಭಿಸಿದೆ. ಲೋಕಾಯುಕ್ತ ಅಧಿಕಾರಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಾಮೈದ ಮತ್ತು ಭೂಮಾಲೀಕರನ್ನು ಈಗಾಗಲೇ ವಿಚಾರಣೆ ನಡೆಸಿದ್ದಾರೆ. ಮುಡಾ ಹಗರಣ ಪ್ರಕರಣದ ಎ1 ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ವಿಚಾರಣೆಗೆ ಒಳಪಡಿಸುವಂತೆ ದೂರುದಾರ ಸ್ನೇಹಮಯಿ ಕೃಷ್ಣ ಲೋಕಾಯುಕ್ತಾ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.

ಸ್ನೇಹಮಯಿ ಕೃಷ್ಣ ಅವರು ಸೋಮವಾರ ಮೈಸೂರು ಲೋಕಾಯುಕ್ತ ಕಚೇರಿಗೆ ಭೇಟಿ ನೀಡಿ ಸಿಎಂ ಸಿದ್ದರಾಮಯ್ಯ ಅವರನ್ನು ವಿಚಾರಣೆಗೆ ಒಳಪಡಿಸುವಂತೆ ಮೈಸೂರು ಲೋಕಾಯುಕ್ತ ಎಸ್​ಪಿ ಟಿ.ಜೆ.ಉದೇಶ್‌ ಅವರಿಗೆ ಮನವಿ ಪತ್ರ ನೀಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ