BJP JDS Padayatra Live: ಬಿಜೆಪಿ-ಜೆಡಿಎಸ್ 6ನೇ ದಿನದ ಪಾದಯಾತ್ರೆ ಲೈವ್ ವೀಕ್ಷಿಸಿ
MUDA Scam, Bangalore Mysore Padayatra Live: ಮುಡಾ ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಿನಾಮೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ನಾಯಕರು ಮೈಸೂರು ಚಲೋ ಪಾದಯಾತ್ರೆ ನಡೆಸುತ್ತಿದ್ದಾರೆ. ಬಿಜೆಪಿ-ಜೆಡಿಎಸ್ ನಾಯಕರ ಪಾದಯಾತ್ರೆ ಲೈವ್ ಇಲ್ಲಿ ವೀಕ್ಷಿಸಿ.
ಮುಡಾ ಹಗರಣದ ವಿರುದ್ಧ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ, ಜೆಡಿಎಸ್ ನಡೆಸುತ್ತಿರುವ ಮೈಸೂರು ಚಲೋ ಪಾದಯಾತ್ರೆ 6ನೇ ದಿನಕ್ಕೆ ಕಾಲಿಟ್ಟಿದೆ. ನಿನ್ನೆ 5ನೇ ದಿನದ ಪಾದಯಾತ್ರೆ ಮಂಡ್ಯ ಜಿಲ್ಲೆಯ ತೂಬಿನಕೆರೆ ಗ್ರಾಮದಲ್ಲಿ ಅಂತ್ಯಗೊಂಡಿತ್ತು. ಇಂದು ತೂಬಿನಕೆರೆ ಗ್ರಾಮದಿಂದ ಶ್ರೀರಂಗಪಟ್ಟಣವರೆಗೆ ಪಾದಯಾತ್ರೆ ಮುಂದುವರಿಯಲಿದೆ. ಶಂಖ ನಾದದ ಮೂಲಕ ಇಂದಿನ ಪಾದಯಾತ್ರೆಗೆ ಚಾಲನೆ ದೊರೆತಿದೆ. ಪಾದಯಾತ್ರೆ ಆರಂಭವಾಗಿ ಎರಡು ಕಿ.ಮೀ. ನಂತರ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಸೇರಿಕೊಳ್ಳಲಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ