ಸಿದ್ದರಾಮಯ್ಯಗೆ ರಾಜೀನಾಮೆ ಕೊಡುವ ಪರಿಸ್ಥಿತಿ ನೂರಕ್ಕೆ ನೂರು ಬರುತ್ತೆ: ಬಿಎಸ್ವೈ ಭವಿಷ್ಯ
ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರ ಅನುಮತಿ ವಿಚಾರವಾಗಿ ಶಿವಮೊಗ್ಗದಲ್ಲಿ ಮಾಧ್ಯಮದವರೊಂದಿಗೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಪ್ರತಿಕ್ರಿಯಿಸಿದ್ದು, ತೀರ್ಪು ಬಂದ ನಂತರ ರಾಜೀನಾಮೆ ಕೊಡುವ ಪರಿಸ್ಥಿತಿ ಬರುತ್ತೆ. ಅದಕ್ಕೂ ಮೊದಲೇ ಸಿಎಂ ರಾಜೀನಾಮೆ ಕೊಡುವುದು ಒಳ್ಳೇದು ಎಂದು ವಾಗ್ದಾಳಿ ಮಾಡಿದ್ದಾರೆ.
ಶಿವಮೊಗ್ಗ, ಸೆಪ್ಟೆಂಬರ್ 04: ತೀರ್ಪು ಬಂದ ನಂತರ ಸಿಎಂ ಸಿದ್ದರಾಮಯ್ಯ (Siddaramaiah) ರಾಜೀನಾಮೆ ಕೊಡುವ ಪರಿಸ್ಥಿತಿ ನೂರಕ್ಕೆ ನೂರು ಬರುತ್ತೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ (BS Yediyurappa) ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅದಕ್ಕೂ ಮೊದಲೇ ಸಿಎಂ ರಾಜೀನಾಮೆ ಕೊಡುವುದು ಒಳ್ಳೇದು. ಸಿದ್ದರಾಮಯ್ಯ ಮಾಡಿರುವ ಎಲ್ಲಾ ಹಗರಣ ಸಾಬೀತು ಆಗುತ್ತಿದೆ. ಯಾವುದೇ ಕಾರಣಕ್ಕೂ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಸರ್ಕಾರಕ್ಕೆ ಕೊವಿಡ್ ಹಗರಣದ ತನಿಖಾ ವರದಿ ಸಲ್ಲಿಕೆ ವಿಚಾರವಾಗಿ ಮಾತನಾಡಿದ್ದು, ಯಾವುದೇ ತೀರ್ಮಾನ ತೆಗೆದುಕೊಳ್ಳಲು ಸರ್ಕಾರ ಸ್ವತಂತ್ರ ಇದೆ. ನಾವು ಯಾವುದೇ ಹೋರಾಟ ಮಾಡಲ್ಲ ಎಂದಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Latest Videos
ಹೊಸ ವರ್ಷಾಚರಣೆ: ಬೆಂಗಳೂರಿನಲ್ಲಿ ಟ್ರಾಫಿಕ್ ರೂಲ್ಸ್ ಹೇಗಿರುತ್ತೆ ಗೊತ್ತಾ?
‘ಮಾರ್ಕ್’ಗೆ ಪೈರಸಿ ಕಾಟ, ಸುದೀಪ್ ತೆಗೆಸಿದ ಪೈರಸಿ ಲಿಂಕ್ ಎಷ್ಟು?
2026 ಕುಂಭ ರಾಶಿಗೆ ಸಾಡೇಸಾತಿಯ ಅಂತಿಮ ಘಟ್ಟ; ಆರೋಗ್ಯದ ನಿರ್ಲಕ್ಷ್ಯಬೇಡ
ಭರ್ಜರಿ ಗಳಿಕೆ ಮಧ್ಯೆ ‘ಮಾರ್ಕ್’ ಸುದ್ದಿಗೋಷ್ಠಿ: ಇಲ್ಲಿದೆ ಲೈವ್
