ಸಿದ್ದರಾಮಯ್ಯಗೆ ರಾಜೀನಾಮೆ ಕೊಡುವ ಪರಿಸ್ಥಿತಿ ನೂರಕ್ಕೆ ನೂರು ಬರುತ್ತೆ: ಬಿಎಸ್​ವೈ ಭವಿಷ್ಯ

Edited By:

Updated on: Sep 04, 2024 | 4:52 PM

ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​ಗೆ ರಾಜ್ಯಪಾಲರ ಅನುಮತಿ ವಿಚಾರವಾಗಿ ಶಿವಮೊಗ್ಗದಲ್ಲಿ ಮಾಧ್ಯಮದವರೊಂದಿಗೆ ಮಾಜಿ ಸಿಎಂ ಬಿ.ಎಸ್​.ಯಡಿಯೂರಪ್ಪ ಪ್ರತಿಕ್ರಿಯಿಸಿದ್ದು, ತೀರ್ಪು ಬಂದ ನಂತರ ರಾಜೀನಾಮೆ ಕೊಡುವ ಪರಿಸ್ಥಿತಿ ಬರುತ್ತೆ. ಅದಕ್ಕೂ ಮೊದಲೇ ಸಿಎಂ ರಾಜೀನಾಮೆ ಕೊಡುವುದು ಒಳ್ಳೇದು ಎಂದು ವಾಗ್ದಾಳಿ ಮಾಡಿದ್ದಾರೆ.

ಶಿವಮೊಗ್ಗ, ಸೆಪ್ಟೆಂಬರ್​ 04: ತೀರ್ಪು ಬಂದ ನಂತರ ಸಿಎಂ ಸಿದ್ದರಾಮಯ್ಯ (Siddaramaiah) ರಾಜೀನಾಮೆ ಕೊಡುವ ಪರಿಸ್ಥಿತಿ ನೂರಕ್ಕೆ ನೂರು ಬರುತ್ತೆ ಎಂದು ಮಾಜಿ ಸಿಎಂ ಬಿ.ಎಸ್​.ಯಡಿಯೂರಪ್ಪ (BS Yediyurappa) ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅದಕ್ಕೂ ಮೊದಲೇ ಸಿಎಂ ರಾಜೀನಾಮೆ ಕೊಡುವುದು ಒಳ್ಳೇದು. ಸಿದ್ದರಾಮಯ್ಯ ಮಾಡಿರುವ ಎಲ್ಲಾ ಹಗರಣ ಸಾಬೀತು ಆಗುತ್ತಿದೆ. ಯಾವುದೇ ಕಾರಣಕ್ಕೂ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಸರ್ಕಾರಕ್ಕೆ ಕೊವಿಡ್​ ಹಗರಣದ ತನಿಖಾ ವರದಿ ಸಲ್ಲಿಕೆ ವಿಚಾರವಾಗಿ ಮಾತನಾಡಿದ್ದು, ಯಾವುದೇ ತೀರ್ಮಾನ ತೆಗೆದುಕೊಳ್ಳಲು ಸರ್ಕಾರ ಸ್ವತಂತ್ರ ಇದೆ. ನಾವು ಯಾವುದೇ ಹೋರಾಟ ಮಾಡಲ್ಲ ಎಂದಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us