ಮುಡಾ, ವಾಲ್ಮೀಕಿ ನಿಗಮ ಹಗರಣ: ಸಂಸತ್ ಭವನದ ಮುಂದೆ ಬಿಜೆಪಿ ಸಂಸದರ ಪ್ರತಿಭಟನೆ
ಕರ್ನಾಟಕದಲ್ಲಿ ಮುಡಾ ಮತ್ತು ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಹಗರಣಗಳು ರಾಜ್ಯದಲ್ಲಿ ಸದ್ದು ಮಾಡುತ್ತಿದ್ದು, ರಾಜಕೀಯ ಕೆಸೆರೆಚಾಟಕ್ಕೆ ಕಾರಣವಾಗಿವೆ. ಮುಡಾ ಮತ್ತು ವಾಲ್ಮೀಕಿ ನಿಗಮದ ಹಗರಣ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜಿನಾಮೆ ನೀಡಬೇಕೆಂದು ಬಿಜೆಪಿ ಸಂಸದರು ಸಂಸತ್ ಭವನದ ಮುಂದೆ ಪ್ರತಿಭಟನೆ ಮಾಡಿದರು.
ನವದೆಹಲಿ/ಬೆಂಗಳೂರು ಜುಲೈ 26: ರಾಜ್ಯದಲ್ಲಿ ಸದ್ದು ಮಾಡಿರುವ ಮುಡಾ (Muda), ವಾಲ್ಮೀಕಿ ನಿಗಮದ ಹಗರಣ ದೆಹಲಿಯಲ್ಲಿ (Delhi) ಪ್ರತಿಧ್ವನಿಸಿದೆ. ಎರಡು ವಾರ ಸದನದಲ್ಲಿ ಕದನಕ್ಕೆ ಕಾರಣವಾಗಿದ್ದ ಮುಡಾ ಅಕ್ರಮ ದೆಹಲಿಗೂ ಮುಟ್ಟಿದೆ. ದೆಹಲಿ ಸಂಸತ್ ಆವರಣದಲ್ಲಿ ರಾಜ್ಯ ಬಿಜೆಪಿ ಸಂಸದರು ಪ್ರತಿಭಟನೆ ನಡೆಸಿ, ರಾಜ್ಯ ಕಾಂಗ್ರೆಸ್ ಸರ್ಕಾರದ (Congress Government) ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ವಾಲ್ಮೀಕಿ ನಿಗಮದ ಹಗರಣ ಹಾಗೂ ಮುಡಾ ಹಗರಣವನ್ನು ಸಿಬಿಐಗೆ ವಹಿಸುವಂತೆ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿಯವರ ನೇತೃತ್ವದಲ್ಲಿ ಇಂದು (ಜು.26) ಬಿಜೆಪಿ ಸಂಸದರು ನವದೆಹಲಿಯಲ್ಲಿ ಸಂಸತ್ ಭವನದ ಎದುರು ಪ್ರತಿಭಟನೆ ನಡೆಸಿದರು.
ವಾಲ್ಮೀಕಿ ನಿಗಮ ಹಗರಣ, ಮುಡಾ ಸೈಟು ಹಂಚಿಕೆ ಪ್ರಕರಣವನ್ನ ಸಿಬಿಐಗೆ ನೀಡಬೇಕು, ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು ಅಂತ ಸಂಸದರು ಆಗ್ರಹಿಸಿದ್ದಾರೆ.
ರಾಜ್ಯದಲ್ಲಿ ಬಿಜೆಪಿ ನಾಯಕರು ಈ ಎರಡು ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜಿನಾಮೆ ನೀಡಬೇಕೆಂದು ಬೆಂಗಳೂರಿನಿಂದ-ಮೈಸೂರುವರೆಗೆ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಂಡಿದ್ದಾರೆ. ಪ್ರತಿಭಟನಾ ಮೆರವಣಿಗೆ ಸಂಬಂಧ ಬಿಜೆಪಿ ನಾಯಕರು ಈಗಾಗಲೆ ರೂಪುರೇಷ ಸಿದ್ದಪಡಿಸಿಕೊಂಡಿದ್ದಾರೆ.
ಇದನ್ನೂ ಓದಿ: ಬೆಂಗಳೂರಿನಿಂದ ಮೈಸೂರಿಗೆ ಬಿಜೆಪಿ ಪಾದಯಾತ್ರೆ: ರೂಪುರೇಷ ಸಿದ್ಧ, ಇಲ್ಲಿದೆ ರೂಟ್ಮ್ಯಾಪ್
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ