ಕಳ್ಳರ ಹಾವಳಿ‌ ತಡೆಯಲು ಮಹಿಳೆಯರ ರಾತ್ರಿ ಗಸ್ತು

Edited By: ವಿವೇಕ ಬಿರಾದಾರ

Updated on: Feb 14, 2025 | 10:57 AM

ಮುಧೋಳದ ಜಯನಗರದಲ್ಲಿ ಕಳ್ಳತನದ ಘಟನೆಗಳು ಹೆಚ್ಚಾಗಿರುವ ಹಿನ್ನೆಲೆಯಲ್ಲಿ, ಸ್ಥಳೀಯ ಮಹಿಳೆಯರು ರಾತ್ರಿ ಗಸ್ತು ತಿರುಗಲು ಆರಂಭಿಸಿದ್ದಾರೆ. ಪೊಲೀಸರ ಸಹಾಯದಿಂದ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಅವರು ಕೈಯಲ್ಲಿ ಕೋಲು ಹಿಡಿದು ರಸ್ತೆಗಳಲ್ಲಿ ಸಂಚರಿಸುತ್ತಿದ್ದಾರೆ.ಇತ್ತೀಚೆಗೆ ಕಳ್ಳತನದ ಅನುಮಾನದ ಮೇಲೆ ಇಬ್ಬರ ಮೇಲೆ ಸ್ಥಳೀಯರು ಹಲ್ಲೆ ನಡೆಸಿದ್ದಾರೆ. ಈ ಘಟನೆಗಳು ಮುಧೋಳದಲ್ಲಿ ಸುರಕ್ಷತಾ ಕ್ರಮಗಳ ಅಗತ್ಯವನ್ನು ಎತ್ತಿಹಿಡಿಯುತ್ತವೆ.

ಬಾಗಲಕೋಟೆ, ಫೆಬ್ರವರಿ 14: ಕಳ್ಳರನ್ನು ಹಿಡಿಯಲು ಮಹಿಳೆಯರು ರಾತ್ರಿ ಗಸ್ತು ಹಾಕಲು ಆರಂಭಿಸಿದರು. ಮುಧೋಳ ಜಯನಗರದ ಮಹಿಳೆಯರು ರಾತ್ರಿ ಪೂರ್ತಿ ಓಣಿಯಲ್ಲಿ ರೌಂಡ್ಸ್​ ಆಗುತ್ತಿದ್ದಾರೆ. ಇತ್ತೀಚೆಗೆ ಮುಧೋಳದಲ್ಲಿ ಹೆಚ್ಚಾದ ಕಳ್ಳತನ ಪ್ರಕರಣಗಳು ಹೆಚ್ಚಾಗಿವೆ. ಈ ಹಿನ್ನೆಲೆಯಲ್ಲಿ ರಾತ್ರಿ ಗಸ್ತು ತಿರುಗುವ ಪೊಲೀಸರ ಜೊತೆ ಸಹಕರಿಸಲು ಮಹಿಳೆಯರು ಕೈಯಲ್ಲಿ ಕೋಲು ಹಿಡಿದು ರಸ್ತೆಗೆ ಇಳಿದಿದ್ದಾರೆ. ಕಳ್ಳತನ‌ ಸಂಶಯದ ಮೇಲೆ‌ ಸ್ಥಳೀಯರು ಇಬ್ಬರ ಮೇಲೆ ‌ಹಲ್ಲೆ‌ ಮಾಡಿ ಕಳಿಸಿದ್ದಾರೆ.

Follow Us
Ravi H Mooki

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More