ಮೂಡಿಗೆರೆ ಶಾಸಕ ಎಮ್ ಪಿ ಕುಮಾರಸ್ವಾಮಿ ವಿರುದ್ಧ ಭುಗಿಲೆದ್ದ ಆಕ್ರೋಶ, ಟಿಕೆಟ್ ನೀಡದಂತೆ ಸಿಟಿ ರವಿ ಮನೆಗೆ ಕಾರ್ಯಕರ್ತರ ಮುತ್ತಿಗೆ!

ಅರುಣ್​ ಕುಮಾರ್​ ಬೆಳ್ಳಿ

Updated on: Mar 22, 2023 | 7:10 PM

ಕಳೆದವಾರ ಜಿಲ್ಲೆಗೆ ಬಿಎಸ್ ಯಡಿಯೂರಪ್ಪ ಆಗಮಿಸಿದಾಗಲೂ ಕಾರ್ಯಕರ್ತರು ತೀವ್ರ ಸ್ವರೂಪದ ಆಕ್ರೋಶ ವ್ಯಕ್ತಪಡಿಸಿದ್ದ್ದರಿಂದ ವಿಜಯಸಂಕಲ್ಪ ಯಾತ್ರೆಯನ್ನು ರದ್ದು ಮಾಡಲಾಗಿತ್ತು.

ಚಿಕ್ಕಮಗಳೂರು: ಮೂಡಿಗೆರೆಯ ಬಿಜೆಪಿ ಶಾಸಕ ಎಂಪಿ ಕುಮಾರಸ್ವಾಮಿಯವರ (MP Kumaraswamy) ಪಕ್ಷದಲ್ಲಿನ ದಿನಗಳು ಮುಗಿದಂತಿವೆ. ಮೂಡಿಗೆರೆಯ ಕ್ಷೇತ್ರದ ಕಾರ್ಯಕರ್ತರು ಕುಮಾರಸ್ವಾಮಿಯಿಂದ ಅದೆಷ್ಟು ಬೇಸತ್ತಿದ್ದಾರೆಂದರೆ ಹಬ್ಬದ ದಿನವಾದ ಇಂದು ನೂರಾರು ಸಂಖ್ಯೆಯಲ್ಲಿ ಗುಂಪುಗೂಡಿ ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ (National secretary) ಮತ್ತು ಚಿಕ್ಕಮಗಳೂರು ಶಾಸಕ ಸಿಟಿ ರವಿ (CT Ravi) ಮನೆಗೆ ಮುತ್ತಿಗೆ ಹಾಕಿ ಕುಮಾರಸ್ವಾಮಿಗೆ ಟಿಕೆಟ್ ನೀಡದಂತೆ ಆಗ್ರಹಿಸಿದರು. ನಗರದ ಬಸವನಹಳ್ಳಿ ಮುಖ್ಯರಸ್ತೆಯಲ್ಲಿರುವ ರವಿ ಮನೆ ಮುಂದೆ ಕಾರ್ಯಕರ್ತರನ್ನು ನೋಡಬಹುದು. ಕಳೆದವಾರ ಜಿಲ್ಲೆಗೆ ಬಿಎಸ್ ಯಡಿಯೂರಪ್ಪ ಆಗಮಿಸಿದಾಗಲೂ ಕಾರ್ಯಕರ್ತರು ತೀವ್ರ ಸ್ವರೂಪದ ಆಕ್ರೋಶ ವ್ಯಕ್ತಪಡಿಸಿದ್ದ್ದರಿಂದ ವಿಜಯಸಂಕಲ್ಪ ಯಾತ್ರೆಯನ್ನು ರದ್ದು ಮಾಡಲಾಗಿತ್ತು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Mar 22, 2023 07:10 PM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.