2 ಓವರ್ಗಳ ಮೂಲಕ ಹ್ಯಾಟ್ರಿಕ್ ವಿಕೆಟ್ ಕಬಳಿಸಿದ ಅಫ್ಘಾನ್ ಸ್ಪಿನ್ನರ್
ಈ ಪಂದ್ಯದಲ್ಲಿ 4 ಓವರ್ಗಳನ್ನು ಎಸೆದ ಮುಜೀಬ್ ಉರ್ ರೆಹಮಾನ್ ಕೇವಲ 21 ರನ್ ನೀಡಿ 4 ವಿಕೆಟ್ ಕಬಳಿಸಿದರು. ಪರಿಣಾಮ ವೆಸ್ಟ್ ಇಂಡೀಸ್ ತಂಡವು 18.5 ಓವರ್ಗಳಲ್ಲಿ 150 ರನ್ಗಳಿಸಿ ಆಲೌಟ್ ಆಯಿತು. ಈ ಮೂಲಕ ಅಫ್ಘಾನಿಸ್ತಾನ್ ತಂಡ 39 ರನ್ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಅಫ್ಘಾನ್ ಪಡೆ ಮೂರು ಪಂದ್ಯಗಳ ಟಿ20 ಸರಣಿಯನ್ನು 2-0 ಅಂತರದಿಂದ ವಶಪಡಿಸಿಕೊಂಡಿದೆ.
ವೆಸ್ಟ್ ಇಂಡೀಸ್ ವಿರುದ್ಧದ 2ನೇ ಟಿ20 ಪಂದ್ಯದಲ್ಲೂ ಅಫ್ಘಾನಿಸ್ತಾನ್ ತಂಡ ಜಯ ಸಾಧಿಸಿದೆ. ದುಬೈ ಇಂಟರ್ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಅಫ್ಘಾನಿಸ್ತಾನ್ ತಂಡವು 20 ಓವರ್ಗಳಲ್ಲಿ 4 ವಿಕೆಟ್ ಕಳೆದುಕೊಂಡು 189 ರನ್ ಕಲೆಹಾಕಿತು.
ಈ ಗುರಿಯನ್ನು ಬೆನ್ನತ್ತಿದ ವೆಸ್ಟ್ ಇಂಡೀಸ್ ತಂಡವು ಮುಜೀಬ್ ಉರ್ ರೆಹಮಾನ್ ಸ್ಪಿನ್ ದಾಳಿಗೆ ತತ್ತರಿಸಿತು. ಅದು ಕೂಡ ಹ್ಯಾಟ್ರಿಕ್ ವಿಕೆಟ್ನೊಂದಿಗೆ ಎಂಬುದು ವಿಶೇಷ.
ವೆಸ್ಟ್ ಇಂಡೀಸ್ ಇನ್ನಿಂಗ್ಸ್‌ನ 8ನೇ ಓವರ್‌ನ ಕೊನೆಯ ಎರಡು ಎಸೆತಗಳಲ್ಲಿ ಎರಡು ವಿಕೆಟ್‌ಗಳನ್ನು ಪಡೆದ ಮುಜೀಬ್, ಆ ಬಳಿಕ ಮರಳಿದ್ದು 16ನೇ ಓವರ್ನಲ್ಲಿ. ಆದರೆ ಹದಿನಾರನೇ ಓವರ್‌ನ ಮೊದಲ ಎಸೆತದಲ್ಲೇ ಕ್ವಿಂಟಿನ್ ಸ್ಯಾಪ್ಸನ್ ವಿಕೆಟ್ ಕಬಳಿಸಿದರು. ಈ ಮೂಲಕ ಎರಡು ಓವರ್ಗಳ ಮೂಲಕ ಹ್ಯಾಟ್ರಿಕ್ ಸಾಧನೆ ಮಾಡಿದರು.
ಅಷ್ಟೇ ಅಲ್ಲದೆ ಈ ಪಂದ್ಯದಲ್ಲಿ 4 ಓವರ್ಗಳನ್ನು ಎಸೆದ ಮುಜೀಬ್ ಉರ್ ರೆಹಮಾನ್ ಕೇವಲ 21 ರನ್ ನೀಡಿ 4 ವಿಕೆಟ್ ಕಬಳಿಸಿದರು. ಪರಿಣಾಮ ವೆಸ್ಟ್ ಇಂಡೀಸ್ ತಂಡವು 18.5 ಓವರ್ಗಳಲ್ಲಿ 150 ರನ್ಗಳಿಸಿ ಆಲೌಟ್ ಆಯಿತು. ಈ ಮೂಲಕ ಅಫ್ಘಾನಿಸ್ತಾನ್ ತಂಡ 39 ರನ್ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಅಫ್ಘಾನ್ ಪಡೆ ಮೂರು ಪಂದ್ಯಗಳ ಟಿ20 ಸರಣಿಯನ್ನು 2-0 ಅಂತರದಿಂದ ವಶಪಡಿಸಿಕೊಂಡಿದೆ.

