2 ಓವರ್​ಗಳ ಮೂಲಕ ಹ್ಯಾಟ್ರಿಕ್ ವಿಕೆಟ್ ಕಬಳಿಸಿದ ಅಫ್ಘಾನ್ ಸ್ಪಿನ್ನರ್

Updated on: Jan 22, 2026 | 9:31 AM

ಈ ಪಂದ್ಯದಲ್ಲಿ 4 ಓವರ್​ಗಳನ್ನು ಎಸೆದ ಮುಜೀಬ್ ಉರ್ ರೆಹಮಾನ್ ಕೇವಲ 21 ರನ್ ನೀಡಿ 4 ವಿಕೆಟ್ ಕಬಳಿಸಿದರು. ಪರಿಣಾಮ ವೆಸ್ಟ್ ಇಂಡೀಸ್ ತಂಡವು 18.5 ಓವರ್​ಗಳಲ್ಲಿ 150 ರನ್​ಗಳಿಸಿ ಆಲೌಟ್ ಆಯಿತು. ಈ ಮೂಲಕ ಅಫ್ಘಾನಿಸ್ತಾನ್ ತಂಡ 39 ರನ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಅಫ್ಘಾನ್ ಪಡೆ ಮೂರು ಪಂದ್ಯಗಳ ಟಿ20 ಸರಣಿಯನ್ನು 2-0 ಅಂತರದಿಂದ ವಶಪಡಿಸಿಕೊಂಡಿದೆ.

ವೆಸ್ಟ್ ಇಂಡೀಸ್ ವಿರುದ್ಧದ 2ನೇ ಟಿ20 ಪಂದ್ಯದಲ್ಲೂ ಅಫ್ಘಾನಿಸ್ತಾನ್ ತಂಡ ಜಯ ಸಾಧಿಸಿದೆ. ದುಬೈ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಅಫ್ಘಾನಿಸ್ತಾನ್ ತಂಡವು 20 ಓವರ್​ಗಳಲ್ಲಿ 4 ವಿಕೆಟ್ ಕಳೆದುಕೊಂಡು 189 ರನ್ ಕಲೆಹಾಕಿತು.

ಈ ಗುರಿಯನ್ನು ಬೆನ್ನತ್ತಿದ ವೆಸ್ಟ್ ಇಂಡೀಸ್ ತಂಡವು ಮುಜೀಬ್ ಉರ್ ರೆಹಮಾನ್ ಸ್ಪಿನ್ ದಾಳಿಗೆ ತತ್ತರಿಸಿತು. ಅದು ಕೂಡ ಹ್ಯಾಟ್ರಿಕ್ ವಿಕೆಟ್​ನೊಂದಿಗೆ ಎಂಬುದು ವಿಶೇಷ.

ವೆಸ್ಟ್ ಇಂಡೀಸ್ ಇನ್ನಿಂಗ್ಸ್‌ನ 8ನೇ ಓವರ್‌ನ ಕೊನೆಯ ಎರಡು ಎಸೆತಗಳಲ್ಲಿ ಎರಡು ವಿಕೆಟ್‌ಗಳನ್ನು ಪಡೆದ ಮುಜೀಬ್, ಆ ಬಳಿಕ ಮರಳಿದ್ದು 16ನೇ ಓವರ್​ನಲ್ಲಿ. ಆದರೆ ಹದಿನಾರನೇ ಓವರ್​ನ ಮೊದಲ ಎಸೆತದಲ್ಲೇ ಕ್ವಿಂಟಿನ್ ಸ್ಯಾಪ್ಸನ್ ವಿಕೆಟ್ ಕಬಳಿಸಿದರು. ಈ ಮೂಲಕ ಎರಡು ಓವರ್​ಗಳ ಮೂಲಕ ಹ್ಯಾಟ್ರಿಕ್ ಸಾಧನೆ ಮಾಡಿದರು.

ಅಷ್ಟೇ ಅಲ್ಲದೆ ಈ ಪಂದ್ಯದಲ್ಲಿ 4 ಓವರ್​ಗಳನ್ನು ಎಸೆದ ಮುಜೀಬ್ ಉರ್ ರೆಹಮಾನ್ ಕೇವಲ 21 ರನ್ ನೀಡಿ 4 ವಿಕೆಟ್ ಕಬಳಿಸಿದರು. ಪರಿಣಾಮ ವೆಸ್ಟ್ ಇಂಡೀಸ್ ತಂಡವು 18.5 ಓವರ್​ಗಳಲ್ಲಿ 150 ರನ್​ಗಳಿಸಿ ಆಲೌಟ್ ಆಯಿತು. ಈ ಮೂಲಕ ಅಫ್ಘಾನಿಸ್ತಾನ್ ತಂಡ 39 ರನ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಅಫ್ಘಾನ್ ಪಡೆ ಮೂರು ಪಂದ್ಯಗಳ ಟಿ20 ಸರಣಿಯನ್ನು 2-0 ಅಂತರದಿಂದ ವಶಪಡಿಸಿಕೊಂಡಿದೆ.

Follow Us
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More