60 ದಶಕದ ಹಾಡನ್ನು ರೀ ಕ್ರಿಯೇಟ್ ಮಾಡಿದ ಮುಕೇಶ್ ಅಂಬಾನಿ ಹಾಗೂ ನೀತಾ ದಂಪತಿ; ಇಲ್ಲಿದೆ ವಿಡಿಯೋ

60 ದಶಕದ ಹಾಡನ್ನು ರೀ ಕ್ರಿಯೇಟ್ ಮಾಡಿದ ಮುಕೇಶ್ ಅಂಬಾನಿ ಹಾಗೂ ನೀತಾ ದಂಪತಿ; ಇಲ್ಲಿದೆ ವಿಡಿಯೋ

ರಾಜೇಶ್ ದುಗ್ಗುಮನೆ
|

Updated on: Jul 06, 2024 | 1:14 PM

ಮುಂಬೈನಲ್ಲಿ ಶುಕ್ರವಾರ ರಾತ್ರಿ ಸಂಗೀತ ಕಾರ್ಯಕ್ರಮ ನಡೆದಿದೆ. ಈ ಕಾರ್ಯಕ್ರಮದಲ್ಲಿ ಅಂಬಾನಿ ಕುಟುಂಬದವರು ಕುಣಿದು ಕುಪ್ಪಳಿಸಿದ್ದಾರೆ. ಈ ವೇಳೆ ಮುಕೇಶ್ ಅಂಬಾನಿ ಹಾಗೂ ನೀತಾ ಅವರು 60 ದಶಕದ ಹಾಡನ್ನು ರೀ ಕ್ರಿಯೇಟ್ ಮಾಡಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ.

ಮುಕೇಶ್ ಅಂಬಾನಿ ಹಾಗೂ ನೀತಾ ಅಂಬಾನಿ ಅವರ ಕಿರಿಯ ಮಗ ಅನಂತ್ ಅಂಬಾನಿ ಅವರು ಬಹುಕಾಲದ ಗೆಳತಿ ರಾಧಿಕಾ ಮರ್ಚಂಟ್​ನ ಮದುವೆ ಆಗುತ್ತಿದ್ದಾರೆ. ಈ ವಿವಾಹ ಕಾರ್ಯಕ್ರಮಕ್ಕೂ ಮೊದಲು ಜುಲೈ 5ರಂದು ಸಂಗೀತ ಕಾರ್ಯಕ್ರಮ ನಡೆದಿದೆ. ಈ ವೇಳೆ ಮುಕೇಶ್ ಅಂಬಾನಿ ಹಾಗೂ ನೀತಾ ಅಂಬಾನಿ ಅವರು ರೆಟ್ರೋ ಹಾಡನ್ನು ರೀ ಕ್ರಿಯೇಟ್ ಮಾಡಿರೋ ವಿಡಿಯೋ ವೈರಲ್ ಆಗಿದೆ. 1968ರಲ್ಲಿ ರಿಲೀಸ್ ಆದ ‘ಬ್ರಹ್ಮಚಾರಿ’ ಚಿತ್ರದ ‘ಚಕ್ಕೆ ಮೇ ಚಕ್ಕಾ..’ ಹಾಡನ್ನು ರೀ ಕ್ರಿಯೇಟ್ ಮಾಡಲಾಗಿದೆ. ಈ ವಿಡಿಯೋದಲ್ಲಿ ಮುಕೇಶ್- ನೀತಾ ಅವರ ಮೊಮ್ಮಕ್ಕಳಾದ ಪೃಥ್ವಿ, ಆದಿಯಾ, ಕೃಷ್ಣಾ ಹಾಗೂ ವೇದಾ ಕಾಣಿಸಿಕೊಂಡಿದ್ದಾರೆ. ಈ ವಿಡಿಯೋ ಗಮನ ಸೆಳೆದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.