ಹಿರಿಯ ಮುತ್ಸದ್ದಿ, ಯುಪಿ ಮಾಜಿ ಮುಖ್ಯಮಂತ್ರಿ ಹಾಗೂ ಹಿಂದುಳಿದ ವರ್ಗಗಳ ಧೀಮಂತ ನಾಯಕ ಮುಲಾಯಂ ಸಿಂಗ್ ಯಾದವ್ ಕಣ್ಮರೆ!

ಹಿರಿಯ ಮುತ್ಸದ್ದಿ, ಯುಪಿ ಮಾಜಿ ಮುಖ್ಯಮಂತ್ರಿ ಹಾಗೂ ಹಿಂದುಳಿದ ವರ್ಗಗಳ ಧೀಮಂತ ನಾಯಕ ಮುಲಾಯಂ ಸಿಂಗ್ ಯಾದವ್ ಕಣ್ಮರೆ!

TV9 Web
| Updated By: ಅರುಣ್​ ಕುಮಾರ್​ ಬೆಳ್ಳಿ

Updated on:Oct 10, 2022 | 11:06 AM

ಹಿಂದುಳಿದ ವರ್ಗಗಳ ಅಗ್ರಗಣ್ಯ ನಾಯಕರೆನಿಸಿಕೊಂಡಿದ್ದ ಮುಲಾಯಂ ಅವರ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನ ಮಂತ್ರಿ ಮತ್ತು ಇನ್ನೂ ಅನೇಕ ಗಣ್ಯರು ಶೋಕ ವ್ಯಕ್ತಪಡಿಸಿದ್ದಾರೆ.

ಉತ್ತರ ಪ್ರದೇಶ ರಾಜಕಾರಣಕ್ಕೆ ಹೊಸ ಭಾಷ್ಯ ಬರೆದ ಮತ್ತು ಸುಮಾರು ಮೂರು ದಶಕಗಳ ಹಿಂದೆ ಆ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರದಿಂದ ದೂರಮಾಡಿ ರಾಜ್ಯದಲ್ಲಿ ಪುನಃ ಅಧಿಕಾರಕ್ಕೆ ಬರದಂತೆ ಮಾಡಿದ ಮೇರು ಸಮಾಜವಾದಿ ನಾಯಕ (Socialist leader), ಭಾರತೀಯ ರಾಜಕಾರಣದ ಹಿರಿಯ ಮುತ್ಸದ್ದಿಗಳಲ್ಲಿ ಒಬ್ಬರಾಗಿದ್ದ ಮತ್ತು ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರ ತಂದೆ ಮುಲಾಯಂ ಸಿಂಗ್ ಯಾದವ್ (Mulayam Singh Yadav) ಅವರು ಇಹಲೋಕದ ಯಾತ್ರೆ ಮುಗಿಸಿದ್ದಾರೆ. 82-ವರ್ಷದವರಾಗಿದ್ದ ಅವರು ಕಳೆದ ಕೆಲ ವಾರಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು ಮತ್ತು ಗುರುಗ್ರಾಮದ ಮೇದಾಂತ ಆಸ್ಪತ್ರೆಯಲ್ಲಿ (Medanta Hospital) ಅವರನ್ನು ದಾಖಲಿಸಲಾಗಿತ್ತು. ಮೂರು ಬಾರಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಹಾಗೂ ಒಮ್ಮೆ ಕೇಂದ್ರದಲ್ಲಿ (96-98) ರಕ್ಷಣಾ ಸಚಿವರಾಗಿದ್ದ ಮುಲಾಯಂ ಅದೇ ಆಸ್ಪತ್ರೆಯಲ್ಲಿ ಸೋಮವಾರ ಬೆಳಗ್ಗೆ ಕೊನೆಯುಸಿರೆಳೆದರು. ಹಿಂದುಳಿದ ವರ್ಗಗಳ ಅಗ್ರಗಣ್ಯ ನಾಯಕರೆನಿಸಿಕೊಂಡಿದ್ದ ಮುಲಾಯಂ ಅವರ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನ ಮಂತ್ರಿ ಮತ್ತು ಇನ್ನೂ ಅನೇಕ ಗಣ್ಯರು ಶೋಕ ವ್ಯಕ್ತಪಡಿಸಿದ್ದಾರೆ.

Published on: Oct 10, 2022 11:05 AM