ಉತಾಹ್, ಜೂನ್ 16: ಅಮೆರಿಕದ ಉತಾಹ್ನ ವೆಸ್ಟ್ ವ್ಯಾಲಿ ಸಿಟಿಯಲ್ಲಿ ನಡೆಯುತ್ತಿದ್ದ ವೆಸ್ಟ್ಫೆಸ್ಟ್ ಎಂಬ ವಾರ್ಷಿಕ ಹಬ್ಬದಲ್ಲಿ ಸಾಮೂಹಿಕ ಗುಂಡಿನ ದಾಳಿ ನಡೆದಿದೆ. ಘಟನೆಯಲ್ಲಿ ಹಲವು ಮಂದಿ ಗಾಯಗೊಂಡಿದ್ದಾರೆ. ಘಟನೆಯಲ್ಲಿ ಯಾವುದೇ ಸಾವುನೋವುಗಳು ಸಂಭವಿಸಿವೆಯೇ ಅಥವಾ ಗುಂಡಿನ ದಾಳಿಯಲ್ಲಿ ಗಾಯಗೊಂಡವರ ನಿಖರ ಸಂಖ್ಯೆ ಎಷ್ಟು ಎಂಬುದು ತಕ್ಷಣಕ್ಕೆ ತಿಳಿದುಬಂದಿಲ್ಲ. ಸೆಂಟೆನಿಯಲ್ ಪಾರ್ಕ್‌ನಲ್ಲಿ ನಡೆಯುತ್ತಿದ್ದ ವೆಸ್ಟ್‌ಫೆಸ್ಟ್‌ನಲ್ಲಿ ಗುಂಡಿನ ದಾಳಿ ನಡೆದಿದೆ ಎಂದು ವೆಸ್ಟ್ ವ್ಯಾಲಿ ಸಿಟಿ ಪೊಲೀಸರು ಎಕ್ಸ್ ಪೋಸ್ಟ್‌ನಲ್ಲಿ ದೃಢಪಡಿಸಿದ್ದಾರೆ. ತನಿಖೆ ಮುಂದುವರೆದಿದ್ದು, ಗಾಯಗೊಂಡವರು ಅಥವಾ ಶಂಕಿತರ ಬಗ್ಗೆ ಹೆಚ್ಚಿನ ಮಾಹಿತಿ ಬಿಡುಗಡೆಯಾಗಿಲ್ಲ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ