ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ಮಿನಿ ಟೆಂಪೋಗೆ ಡಿಕ್ಕಿಯಾಗಿ ಬಳಿಕ ಆಟೋಗೆ ಡಿಕ್ಕಿ ಹೊಡೆದಿರುವ ಟಿಪ್ಪರ್, ತಪ್ಪಿದ ಭಾರಿ ಅನಾಹುತ

Edited By:

Updated on: Dec 16, 2025 | 9:08 AM

ಚಿಕ್ಕಬಳ್ಳಾಪುರ ನಗರದ ವಾಪಸಂದ್ರ ಸೇತುವೆ ಬಳಿ ಸರಣಿ ಅಪಘಾತ ಸಂಭವಿಸಿದೆ. ಅದೃಷ್ಟವಶಾತ್ ಸಾವು-ನೋವು ಸಂಭವಿಸಿಲ್ಲ. ಮಿನಿ ಟೆಂಪೋಗೆ ಡಿಕ್ಕಿ ಹೊಡೆದ ಟಿಪ್ಪರ್ ಬಳಿಕ ಆಟೋಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಆಟೋ ತೀವ್ರ ಜಖಂಗೊಂಡಿದೆ. ಚಿಕ್ಕಬಳ್ಳಾಪುರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ವಿಡಿಯೋ ಇಲ್ಲಿದೆ.

ಚಿಕ್ಕಬಳ್ಳಾಪುರ, ಡಿಸೆಂಬರ್ 16: ನಗರದ ವಾಪಸಂದ್ರ ಸೇತುವೆ ಬಳಿ ಟಿಪ್ಪರ್, ಆಟೋ ಹಾಗೂ ಮಿನಿ‌ಟೆಂಪೋ ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿದೆ. ಟಿಪ್ಪರ್ ಮಿನಿ ಟೆಂಪೋಗೆ ಡಿಕ್ಕಿ ಹೊಡೆದು ಬಳಿಕ ಆಟೋಗೆ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಸಣ್ಣಪುಟ್ಟ ಗಾಯಗಳೊಂದಿಗೆ ವಾಹನಗಳ ಚಾಲಕರು ಪಾರಾಗಿದ್ದಾರೆ.

 

Loading...
Unable to load recommendations.
Follow Us
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ

ಚಿಕ್ಕಬಳ್ಳಾಪುರ ಎಂಬ ಸುಂದರ ಊರು ನನಗೆ ಸುಂದರವಾದ ಬದುಕನ್ನು ಕಟ್ಟಿಕೊಟ್ಟಿದೆ. 18 ವರ್ಷಗಳಿಂದ ಹಗಲುರಾತ್ರಿ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಜನ ಸೇವೆಯಲ್ಲಿದ್ದೇನೆ. ಶಿಕ್ಷಣವೆಲ್ಲ ಬೆಂಗಳೂರಿನಲ್ಲಿ. ಸರ್ಕಾರಿ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆಯಲ್ಲಿ ಪದವಿ. ಬೆಂಗಳೂರು ವಿವಿಯಲ್ಲಿ ಬಿ.ಸಿ.ಎ ವ್ಯಾಸಂಗ. ವಿದ್ಯಾರ್ಥಿದೆಸೆಯಿಂದಲೆ ಟಿವಿ9 ಕನ್ನಡದಲ್ಲಿ ಕೆಲಸ.

Read More