ಡಾಬಸ್ ಪೇಟೆ ಬಳಿ ಸರಣಿ ಅಪಘಾತ: ಇಬ್ಬರ ಸ್ಥಿತಿ ಗಂಭೀರ, 10ಕ್ಕೂ ಹೆಚ್ಚು ಮಂದಿಗೆ ಗಾಯ

Updated on: May 06, 2026 | 7:31 PM

ನೆಲಮಂಗಲ ತಾಲೂಕಿನ ಡಾಬಸ್ ಪೇಟೆ ಅಂಚೆಮನೆ ಗೇಟ್ ಬಳಿ ಬೈಕ್, ಕಾರು, ಲಾರಿ, ಬಸ್, ಬುಲೆರೋ ಜೀಪ್ ನಡುವೆ ಸರಣಿ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಬುಲೆರೋ ಪಲ್ಟಿಯಾಗಿದ್ದು, 10ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ. ಆ ಪೈಕಿ ಇಬ್ಬರ ಸ್ಥಿತಿ ಗಂಭೀರ ಎನ್ನಲಾಗಿದ್ದು, ಹೆದ್ದಾರಿಯಲ್ಲಿ ಭಾರಿ ಟ್ರಾಫಿಕ್ ಜಾಮ್ ಉಂಟಾಗಿದೆ.

ನೆಲಮಂಗಲ, ಮೇ 06:  ತಾಲೂಕಿನ ಡಾಬಸ್ ಪೇಟೆಯ ಅಂಚೆಮನೆ ಗೇಟ್ ಬಳಿಯ ಬೆಂಗಳೂರು-ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ  ಸರಣಿ ಅಪಘಾತ ಸಂಭವಿಸಿದೆ.  ಬೈಕ್, ಎರಡು ಕಾರು, ಲಾರಿ, ಬಸ್,  ಪಿಕಪ್​​ ವಾಹನ ಅಪಘಾತಕ್ಕೀಡಾಗಿದ್ದು, ಡಿಕ್ಕಿಯ ರಭಸಕ್ಕೆ ಹೆದ್ದಾರಿಯಲ್ಲಿ ಪಿಕ್​​ಅಪ್​​ ವಾಹನ ಪಲ್ಟಿಯಾಗಿದೆ. ಅಪಘಾತದಲ್ಲಿ 10ಕ್ಕೂ ಹೆಚ್ಚು ಜನರಿಗೆ ಗಾಯಗಳಾಗುದ್ದು. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆದ್ದಾರಿಯಲ್ಲಿ ಭಾರಿ ಟ್ರಾಫಿಕ್ ಜಾಮ್ ಉಂಟಾಗಿದ್ದು, ಸ್ಥಳಕ್ಕೆ ನೆಲಮಂಗಲ ಸಂಚಾರ ಪೊಲೀಸರು ದೌಡಾಯಿಸಿದ್ದಾರೆ. ಗಾಯಾಳುಗಳ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: May 06, 2026 07:20 PM
Follow Us
Prasanna Hegde

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More