Video: ಮಹಿಳಾ ಬೋಗಿಗೆ ನುಗ್ಗಿ ವಿದ್ಯಾರ್ಥಿನಿಯನ್ನು ಚಲಿಸುತ್ತಿದ್ದ ರೈಲಿನಿಂದ ತಳ್ಳಿದ ವ್ಯಕ್ತಿ
ವ್ಯಕ್ತಿಯೊಬ್ಬ ರೈಲಿನ ಮಹಿಳಾ ಬೋಗಿಗೆ ನುಗ್ಗಿದ್ದಷ್ಟೇ ಅಲ್ಲದೆ ವಿದ್ಯಾರ್ಥಿನಿಯನ್ನು ಚಲಿಸುತ್ತಿದ್ದ ರೈಲಿನಿಂದ ತಳ್ಳಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಮುಂಬೈ ಸ್ಥಳೀಯ ರೈಲಿನ ಮಹಿಳಾ ಕೋಚ್ ಹತ್ತಿದ ನಂತರ 50 ವರ್ಷದ ವ್ಯಕ್ತಿಯೊಬ್ಬ 18 ವರ್ಷದ ಕಾಲೇಜು ವಿದ್ಯಾರ್ಥಿನಿಯನ್ನು ಚಲಿಸುವ ರೈಲಿನಿಂದ ತಳ್ಳಿದ್ದಾನೆ ಎಂದು ಆರೋಪಿಸಲಾಗಿದೆ. ಮಹಿಳಾ ಬೋಗಿಗೆ ಹತ್ತಿದ್ದಕ್ಕೆ ವ್ಯಕ್ತಿಯನ್ನು ಯುವತಿ ಪ್ರಶ್ನಿಸಿದ್ದಳು, ಅದಕ್ಕೆ ಕೋಪಗೊಂಡ ವ್ಯಕ್ತಿ ಆಕೆಯನ್ನು ರೈಲಿನಿಂದ ಕೆಳಗೆ ತಳ್ಳಿದ್ದಾನೆ.
ಮುಂಬೈ, ಡಿಸೆಂಬರ್ 22: ವ್ಯಕ್ತಿಯೊಬ್ಬ ರೈಲಿನ ಮಹಿಳಾ ಬೋಗಿಗೆ ನುಗ್ಗಿದ್ದಷ್ಟೇ ಅಲ್ಲದೆ ವಿದ್ಯಾರ್ಥಿನಿಯನ್ನು ಚಲಿಸುತ್ತಿದ್ದ ರೈಲಿನಿಂದ ತಳ್ಳಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಮುಂಬೈ ಸ್ಥಳೀಯ ರೈಲಿನ ಮಹಿಳಾ ಕೋಚ್ ಹತ್ತಿದ ನಂತರ 50 ವರ್ಷದ ವ್ಯಕ್ತಿಯೊಬ್ಬ 18 ವರ್ಷದ ಕಾಲೇಜು ವಿದ್ಯಾರ್ಥಿನಿಯನ್ನು ಚಲಿಸುವ ರೈಲಿನಿಂದ ತಳ್ಳಿದ್ದಾನೆ ಎಂದು ಆರೋಪಿಸಲಾಗಿದೆ. ಮಹಿಳಾ ಬೋಗಿಗೆ ಹತ್ತಿದ್ದಕ್ಕೆ ವ್ಯಕ್ತಿಯನ್ನು ಯುವತಿ ಪ್ರಶ್ನಿಸಿದ್ದಳು, ಅದಕ್ಕೆ ಕೋಪಗೊಂಡ ವ್ಯಕ್ತಿ ಆಕೆಯನ್ನು ರೈಲಿನಿಂದ ಕೆಳಗೆ ತಳ್ಳಿದ್ದಾನೆ.
ಆಕೆ ತನ್ನ ಸ್ನೇಹಿತೆಯೊಂದಿಗೆ ಖಾರ್ಘರ್‌ನಲ್ಲಿರುವ ಕಾಲೇಜಿಗೆ ಪ್ರಯಾಣಿಸುತ್ತಿದ್ದಾಗ ಪನ್ವೇಲ್ ಮತ್ತು ಖಂಡೇಶ್ವರ ರೈಲು ನಿಲ್ದಾಣಗಳ ನಡುವೆ ಈ ಘಟನೆ ವರದಿಯಾಗಿದೆ.ಪನ್ವೇಲ್ ನಿಲ್ದಾಣದಿಂದ ಸುಮಾರು 1.5 ಕಿ.ಮೀ ದೂರದಲ್ಲಿ ವಿದ್ಯಾರ್ಥಿನಿ ಬಿದ್ದಿದ್ದಾಳೆ ಎಂದು ತಿಳಿದುಬಂದಿದೆ. ಆಕೆಯ ತಲೆ, ಸೊಂಟ ಮತ್ತು ಕೈಕಾಲುಗಳಿಗೆ ಗಂಭೀರ ಗಾಯಗಳಾಗಿವೆ. ಈಗ ಆಕೆಯ ಸ್ಥಿತಿ ಸ್ಥಿರವಾಗಿದೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ